ಮುಂಗಾರಿಗೂ ಮುನ್ನವೇ ನಗರದಲ್ಲಿ ಮಳೆಯ ಆರ್ಭಟ: ಮತ್ತಷ್ಟು ಮಳೆಯಾಗುವ ಸಾಧ್ಯತೆ

ಕರಾವಳಿ ಕರ್ನಾಟಕದ ಭಾಗಕ್ಕೆ ಈಗಾಗಲೇ ಮುಂಗಾರು ಪ್ರವೇಶವಾಗಿದ್ದು, ನಗರ ಪ್ರವೇಶಿಸಲು ಇನ್ನು ಕೆಲವೇ ದಿನಗಳು ಬಾಕಿಯಿರುವಾಗಲೇ ನಗರದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನಗರದಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ...
ಮುಂಗಾರಿಗೂ ಮುನ್ನವೇ ನಗರದಲ್ಲಿ ಮಳೆಯ ಆರ್ಭಟ: ಮತ್ತಷ್ಟು ಮಳೆಯಾಗುವ ಸಾಧ್ಯತೆ
ಮುಂಗಾರಿಗೂ ಮುನ್ನವೇ ನಗರದಲ್ಲಿ ಮಳೆಯ ಆರ್ಭಟ: ಮತ್ತಷ್ಟು ಮಳೆಯಾಗುವ ಸಾಧ್ಯತೆ
ಬೆಂಗಳೂರು: ಕರಾವಳಿ ಕರ್ನಾಟಕದ ಭಾಗಕ್ಕೆ ಈಗಾಗಲೇ ಮುಂಗಾರು ಪ್ರವೇಶವಾಗಿದ್ದು, ನಗರ ಪ್ರವೇಶಿಸಲು ಇನ್ನು ಕೆಲವೇ ದಿನಗಳು ಬಾಕಿಯಿರುವಾಗಲೇ ನಗರದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ನಗರದಲ್ಲಿ ಮತ್ತಷ್ಟು ಮಳೆಯಾಗುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ. 
ನಗರದಲ್ಲಿ ಭಾರೀ ಮಳೆ ಹಿನ್ನಲೆಯಲ್ಲಿ ಮಳೆ ಪರಿಸ್ಥಿತಿಗಳನ್ನು ಎದುರಿಸಲು ಅಧಿಕಾರಿಗಳು ನಡೆಸಿರುವ ಸಿದ್ಧಗಳನ್ನು ನಿನ್ನೆಯಷ್ಟೇ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಪರಿಶೀಲನೆ ನಡೆಸಿದರು. 
ಜೂನ್7 ರಿಂದ 12 ಮಧ್ಯದಲ್ಲಿ ನಗರಕ್ಕೆ ಮುಂಗಾರು ಪ್ರವೇಶ ಮಾಡಲಿದ್ದು, ಈಗಾಗಲೇ ಮಲೆನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ ಎಂದು ವರದಿಗಳು ತಿಳಿಸಿವೆ. 
ಕರ್ನಾಟಕ ರಾಜ್ಯ ರಾಷ್ಟ್ರೀಯ ವಿಪತ್ತು ನಿರ್ವಹಣಾ ಘಟಕದ ಯೋಜನೆಯ ವಿಜ್ಞಾನಿ ಶುಭಾ ಅವಿನಾಶ್ ಅವರು ಮಾತನಡಿ, ಹವಾಮಾನ ಇಲಾಖೆಯ ವರದಿಗಳ ಪ್ರಕಾರ ಬೇಗೂರು, ಹೆಚ್ಎಸ್ಆರ್ ಲೇಔಟ್ ಮತ್ತು ಬಿಟಿಎಂ ಲೇಔಟ್ ನಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗುವ ಸಾಧ್ಯತೆಗಳಿವೆ ಎಂದು ತಿಳಿಸಿದೆ. ಅರೆಕೆರೆಯಲ್ಲಿಯೂ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದ್ದಾರೆ. 
ಬೆಂಗಳೂರು ನಗರ ಜಿಲ್ಲೆಯಲ್ಲಿಯ ಅರೆಕೆರೆಯೆಲ್ಲಿ ಭಾನುವಾರ ಸಂಜೆ 7 ಗಂಟೆಗೆ ಒಟ್ಟು 30ಕ ಎಂಎಂ ಮಳೆಯಾಗಿದೆ. ನೆಲಮಂಗಲ, ಕೊಟ್ಟಿಗೆಹಳ್ಳಿ ಹಾಗೂ ಇತರೆ ಪ್ರದೇಶಗಳಲ್ಲಿ 20 ಎಂಎಂ ಮಳೆಯಾಗಿದೆ. ನಗರದ ಇತರೆಡೆ ಮಧ್ಯಮ ಮಟ್ಟದಲ್ಲಿ ಮಳೆಯಾಗಿದೆ. 
ತುಮಕೂರಿನ ಮಡಿಹಳ್ಳಿಯಲ್ಲಿ 82 ಎಂಎಂ ಮಳೆಯಾಗಿದ್ದರೆ, ರಾಮನಗರ ಮತ್ತು ತುಮಕೂರಿನಲ್ಲಿ 70ಎಂಎಂ ಹೆಚ್ಚುವರಿ ಮಳೆಯಾಗಿದೆ ಎಂದು ವರದಿಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com