ಸಂಪುಟ ವಿಸ್ತರಣೆ ಕುರಿತಂತೆ ಖಾತೆ ಹಂಚಿಕೆ ಕುರಿತು ಕೆಲ ಸಮಸ್ಯೆಗಳು ಎದುರಾಗಿದ್ದು, ಸಂಪುಟ ವಿಸ್ತರಣೆ ಬಳಿಕ ಸಿದ್ದರಾಮಯ್ಯ ಹಾಗೂ ಇನ್ನಿತರೆ ಕಾಂಗ್ರೆಸ್ ನಾಯಕರು ತಮ್ಮ ತಮ್ಮ ಕ್ಷೇತ್ರಗಳಿಗೆ ಭೇಟಿ ನೀಡಲಿದ್ದಾರೆ. ಬಾದಾಮಿ ಕ್ಷೇತ್ರದ ಮತದಾರರಿಗೆ ಧನ್ಯವಾದ ಹೇಳುವ ಸಲುವಾಗಿ ಸಿದ್ದರಾಮಯ್ಯ ಅವರು ಜೂ.7 ಕ್ಕೆ ಬಾದಾಮಿ ಕ್ಷೇತ್ರದಲ್ಲಿರುವ ಪಂಚಾಯತ್ ಮುಖ್ಯ ಕಚೇರಿಗೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.