

ಕಾರವಾರ: ಯುಪಿಎಸ್ ಸಿ ಪರೀಕ್ಷೆ ಬರೆದು ಉನ್ನತ ಅಧಿಕಾರಿಯಾಗಬೇಕೆಂಬ ಕನಸಿನೊಂದಿಗೆ ಎರಡು ವರ್ಷಗಳಿಂದ ಶ್ರಮಪಟ್ಟಿದ್ದ ಕುಮಟಾದ ಅಭ್ಯರ್ಥಿಯೊಬ್ಬ ಪರೀಕ್ಷಾ ಕೇಂದ್ರಕ್ಕೆ ತಡವಾಗಿ ಹೋದ್ದರಿಂದ ಪರೀಕ್ಷೆ ಬರೆಯಲು ಅವಕಾಶ ಸಿಗದೆ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವರುಣ್ ಚಂದ್ರ (26) ದೆಹಲಿಯ ಪಹಾಡ್‌ಗಂಜ್‌ನಲ್ಲಿದ್ದ ತಮ್ಮ ಕೊಠಡಿಯ ಫ್ಯಾನ್‌ಗೆ ನೇಣು ಬಿಗಿದುಕೊಂಡು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.