ಇಂದು ಸಚಿವರಾಗಿ ಪ್ರಮಾಣವಚನ ಸ್ವೀಕರಿಸುತ್ತಿರುವ ಶಾಸಕರ ಪಟ್ಟಿ
ತೀವ್ರ ವಿರೋಧ ಹಾಗೂ ಅಸಮಾಧಾನದ ನಡುವೆ ಬಹುನಿರೀಕ್ಷಿತ ಸಚಿವ ಸಂಪುಟ ರಚನೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ 25 ಮಂದಿ ಶಾಸಕರು ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ...
ಬೆಂಗಳೂರು: ತೀವ್ರ ವಿರೋಧ ಹಾಗೂ ಅಸಮಾಧಾನದ ನಡುವೆ ಬಹುನಿರೀಕ್ಷಿತ ಸಚಿವ ಸಂಪುಟ ರಚನೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಿಂದ 25 ಮಂದಿ ಶಾಸಕರು ಸಚಿವರಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ರಾಜಭವನದಲ್ಲಿ ನಡೆಯುವ ಸರಳ ಸಮಾರಂಭದಲ್ಲಿ ರಾಜ್ಯಪಾಲ ವಾಜುಬಾಯ್ ವಾಲಾ ಅವರು ಅಧಿಕಾರದ ಗೌಪ್ಯತೆ ಭೋದಿಸಲಿದ್ದಾರೆ. ಕಾಂಗ್ರೆಸ್ ನಿಂದ 15 ಶಾಸಕರು ಹಾಗೂ ಜೆಡಿಎಸ್ ನಿಂದ 8 ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.