ಪ್ರಸಕ್ತ ವರ್ಷ 261 ಪ್ರಾಥಮಿಕ ಶಾಲೆಗಳಲ್ಲಿ ಶೂನ್ಯ ದಾಖಲಾತಿ ಇದೆ. ಇಲ್ಲಿ ಒಟ್ಟು 229 ಶಿಕ್ಷಕರು ಕೆಲಸ ಮಾಡುತ್ತಿದ್ದು, ಪಾಠವೇ ಮಾಡದೇ ವೇತನ ಪಡೆಯುತ್ತಿದ್ದಾರೆ. ಇದೇ ರೀತಿ 57 ಪ್ರೌಢ ಶಾಲೆಗಳಲ್ಲಿ 137 ಶಿಕ್ಷಕರು ಕೆಲಸವೇ ಮಾಡದೆ ವೇತ ಪಡೆಯುತ್ತಿದ್ದಾರೆ. 50 ಮಕ್ಕಳಿಗಿಂತ ಕಡಿಮೆ ದಾಖಲಾತಿ ಇದ್ದರೆ, ಅದನ್ನು ಹೆಚ್ಚುವರಿ ಜವಾಬ್ದಾರಿ ಮುಖ್ಯಶಿಕ್ಷಕರು ಮತ್ತು ಶಿಕ್ಷಕರದ್ದಾಗಿರುತ್ತದೆ. ಶೂನ್ಯ ದಾಖಲಾತಿ ಇರುವ ಪ್ರಾಥಮಿಕ ಶಾಲೆಗಳು 25 ಹಾಗೂ ಪ್ರೌಢ ಶಾಲಾ ಶಿಕ್ಷಕರು 50 ಮಕ್ಕಳನ್ನು ಶಾಲೆಗೆ ಸೇರಿಸಿದಿದ್ದರೆ, ಸಿಇಒ ಅಲ್ಲಿನ ಶಿಕ್ಷಕರನ್ನು ಬೇರೆ ಶಾಲೆಗೆ ಮರು ನಿಯೋಜನೆ ಮಾಡಬೇಕೆಂದು ತಿಳಿಸಿದ್ದಾರೆಂದು ವರದಿಗಳು ತಿಳಿಸಿವೆ.