ಗೌರಿ ಲಂಕೇಶ್
ಗೌರಿ ಲಂಕೇಶ್

ಗೌರಿ ಲಂಕೇಶ್ ಹತ್ಯೆ: ಆರೋಪಿ ನವೀನ್ ಕುಮಾರ್ ಪೊಲೀಸ್ ಕಸ್ಟಡಿ 14 ದಿನ ವಿಸ್ತರಣೆ

ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ...
Published on

ಬೆಂಗಳೂರು: ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಕೆ ಟಿ ನವೀನ್ ಕುಮಾರ್ ನ ಪೊಲೀಸ್ ಕಸ್ಟಡಿ ಅವಧಿಯನ್ನು 14 ದಿನಗಳವರೆಗೆ ವಿಸ್ತರಿಸಲಾಗಿದೆ.

ಗೌರಿ ಲಂಕೇಶ್ ಹತ್ಯೆ ಕೇಸಿನ ವಿಚಾರಣೆಯಲ್ಲಿ ಆರೋಪಿ ನವೀನ್ ಕುಮಾರ್ ನಿಂದ ಮಹತ್ವದ ವಿಚಾರಗಳು ಬೆಳಕಿಗೆ ಬರುತ್ತಿದ್ದು, ಆತನನ್ನು ಇನ್ನಷ್ಟು ವಿಚಾರಣೆಗೊಳಪಡಿಸಲು ಕಾಲಾವಕಾಶ ಬೇಕಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಹಿನ್ನಲೆಯಲ್ಲಿ ಇನ್ನೂ 14 ದಿನಗಳ ಕಾಲ ಆತ ಪೊಲೀಸರ ವಶದಲ್ಲಿರಲಿದ್ದಾನೆ.

ಗೌರಿ ಲಂಕೇಶ್ ಹತ್ಯೆ ಸಂಬಂಧ ಎಸ್‌ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದ ಮದ್ದೂರಿನ ಕೆ.ಟಿ.ನವೀನ್‌ಕುಮಾರ್ ಅಲಿಯಾಸ್ ಹೊಟ್ಟೆ ಮಂಜನನ್ನು ಹತ್ಯೆಗೆ ಒಳಸಂಚು ರೂಪಿಸಿದ್ದ ಆರೋಪದಡಿ ಬಂಧಿಸಿದ್ದರು. ಆತನನ್ನು ಕಳೆದ ಫೆಬ್ರವರಿ 16ರಂದು ಬೆಂಗಳೂರಿನ ಮೆಜೆಸ್ಟಿಕ್ ಬಸ್ ನಿಲ್ದಾಣದಲ್ಲಿ ಸಿಸಿಬಿ ಪೊಲೀಸರು ವಶಕ್ಕೆ ಪಡೆದು ನಾಡ ಪಿಸ್ತೂಲ್, ಪಾಯಿಂಟ್ 32 ರಿವಾಲ್ವರ್ ಐದು ಗುಂಡುಗಳನ್ನು ಜಪ್ತಿ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com