ಮಹಾಮಳೆಗೆ ಕರ್ನಾಟಕ ತತ್ತರ: ಜನ ಜೀವನ ಅಸ್ತವ್ಯಸ್ತ, ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜಿಗೆ ರಜೆ

ಮುಂಗಾರು ಮಳೆ ಪ್ರಾರಂಭಕ್ಕೂ ಮುನ್ನವೇ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು ಮಹಾಮಳೆಗೆ ರಾಜ್ಯ ತತ್ತರಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಮುಂಗಾರು ಮಳೆ ಪ್ರಾರಂಭಕ್ಕೂ ಮುನ್ನವೇ ರಾಜ್ಯದಲ್ಲಿ ವರುಣನ ಆರ್ಭಟ ಜೋರಾಗಿದ್ದು ಮಹಾಮಳೆಗೆ ರಾಜ್ಯ ತತ್ತರಿಸಿದೆ.
ರಾಜ್ಯದ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ. ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು ಹಳ್ಳ ಕೊಳ್ಳಗಳೆಲ್ಲಾ ತುಂಬಿ ಹರಿಯುತ್ತಿವೆ. 
ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ಜಿಲ್ಲಾಡಳಿತ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿದೆ. ಮಂಗಳವಾರ ಬೆಳಗ್ಗೆ ವೇಳೆಗೆ ಚಿಕ್ಕಮಗಳೂರಿನಲ್ಲಿ 13 ಸೆಂಟಿಮೀಟರ್ ಮಳೆಯಾಗಿದೆ. 
ನದಿ ಭದ್ರಾವತಿ ತುಂಬಿ ಹಾರಿಯುತ್ತಿದ್ದು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಇನ್ನು ಶಿರಾಡಿಘಾಟ್ ನಲ್ಲಿ ಗುಡ್ಡ ಕುಸಿದ ಪರಿಣಾಮ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಇದರಿಂದಾಗಿ ಎರಡು ದಿನಗಳ ಕಾಲ ಶಿರಾಡಿಘಾಟ್ ನಲ್ಲಿ ಸಂಚಾರ ಬಂದ್ ಮಾಡಲಾಗಿದೆ. ಇನ್ನು ಕೆಲವೆಡೆ ಭಾರೀ ಮಳೆಗೆ ಸೇತುವೆ ಕೊಚ್ಚಿ ಹೋಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com