116 ದಿನಗಳ ಜೈಲುವಾಸ ಅಂತ್ಯ: ಮೊಹಮದ್ ನಲಪಾಡ್ ಗೆ ಜಾಮೀನು ಮಂಜೂರು

ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಗೆ ಹೈಕೋರ್ಟ್ ಷರತ್ತುಬದ್ಧ ನೀಡಿದೆ.2 ಲಕ್ಷ ಬಾಂಡ್ ಇಬ್ಬರ ಶ್ಯೂರಿಟಿ ಪಡೆದು ಸಾಕ್ಷ್ಯಾಧಾರ ನಾಶ ಮಾಡದಂತೆ ಹೈಕೋರ್ಟ್ ಷರತ್ತು ವಿಧಿಸಿದೆ. ..
ಮೊಹಮದ್ ನಲಪಾಡ್
ಮೊಹಮದ್ ನಲಪಾಡ್
ಬೆಂಗಳೂರು: ಫರ್ಜಿ ಕೆಫೆಯಲ್ಲಿ ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿದೆ.
2 ಲಕ್ಷ ಬಾಂಡ್  ಇಬ್ಬರ ಶ್ಯೂರಿಟಿ ಪಡೆದು ಸಾಕ್ಷ್ಯಾಧಾರ ನಾಶ ಮಾಡದಂತೆ ಹೈಕೋರ್ಟ್ ಷರತ್ತು ವಿಧಿಸಿದೆ.  ಜೊತೆಗೆ ಬೆಂಗಳೂರು ಬಿಟ್ಟು ಎಲ್ಲಿಯೂ ತೆರಳದಂತೆ ಸೂಚಿಸಿದೆ. ಇದರಿಂದ ನಲಪಾಡ್ ನ 116 ದಿನಗಳ ಜೈಲುವಾಸ ಅಂತ್ಯವಾಗಿದೆ.
ನಲಪಾಡ್ ಪರ ವಕೀಲ ಬಿ.ವಿ ಆಚಾರ್ಯ ವಾದ ಮಂಡಿಸಿದ್ದರು. ಮಲ್ಯ ರಸ್ತೆಯಲ್ಲಿರುವ ಫರ್ಜಿ ಕೆಫೆಯಲ್ಲಿ ಉದ್ಯಮಿ ಲೋಗನಾಥನ್ ಅವರ ಪುತ್ರ ವಿದ್ವತ್ ಮೇಲೆ ನಲಪಾಡ್ ಮತ್ತವನ ಗ್ಯಾಂಗ್ ಗಂಭೀರವಾಗಿ ಹಲ್ಲೆ ನಡೆಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com