ಗೌರಿ ಹತ್ಯೆ ಪ್ರಕರಣ: ವಾಗ್ಮೋರೆ ನೋಡಿ ತಲೆ ಚಚ್ಚಿಕೊಂಡ ಕಾಳೆ, ಪೊಲೀಸರ ವಿರುದ್ಧ ಹಲ್ಲೆ ಆರೋಪ

ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ...
ಗೌರಿ ಲಂಕೇಶ್
ಗೌರಿ ಲಂಕೇಶ್
ಬೆಂಗಳೂರು: ಹಿರಿಯ ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಮೂರನೇ ಆರೋಪಿಯಾಗಿರುವ ಅಮೋಲ್ ಕಾಳೆ ಪೊಲೀಸರ ವಿರುದ್ಧ ಹಲ್ಲೆ ಆರೋಪ ಮಾಡಿದ್ದಾರೆ.
ಪೊಲೀಸರು ನನ್ನ ಮೇಲೆ ಹಲ್ಲೆ ನಡೆಸಿದ್ದಲ್ಲದೆ, ನನ್ನನ್ನು ಗೋಡೆಗೆ ಎಸೆದಿದ್ದಾರೆ ಎಂದು ಕಾಳೆ ಗುರುವಾರ ಕೋರ್ಟ್ ಗೆ ತಿಳಿಸಿದ್ದಾನೆ.
ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ(ಎಸ್ಐಟಿ)ದ ಅಧಿಕಾರಿಗಳ ಪ್ರಕಾರ, ಕಾಳೆ ಬಂಧಿತ ಪ್ರಮುಖ ಆರೋಪಿ ಪರಶುರಾಮ್ ವಾಗ್ಮೋರೆಯನ್ನು ನೋಡಿದ ಕೂಡಲೇ ಜೋರಾಗಿ ಕಿರುಚಿಕೊಂಡು ಗೋಡೆಗೆ ಮತ್ತು ಬಾಗಿಲಗೆ ತಲೆ ಚಚ್ಚಿಕೊಂಡಿದ್ದಾನೆ.
ತಮ್ಮ ಕಕ್ಷಿದಾರ ಅಮೋಲ್ ಕಾಳೆ ಪೊಲೀಸ್ ವಶದಲ್ಲಿದ್ದಾಗ ಪೊಲೀಸರು ಆತನಿಗೆ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ನೀಡಿದ್ದಾರೆ ಎಂದು ಆರೋಪಿ ಪರ ವಕೀಲ ಎನ್ ಪಿ ಅಮೃತೇಶ್ ಅವರು ಆರೋಪಿಸಿದ್ದಾರೆ.
ಪೊಲೀಸರ ಹಲ್ಲೆಗೆ ಸಂಬಂಧಿಸಿದಂತೆ ಆರೋಪಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಬೇಕು ಎಂದು ನ್ಯಾಯಾಧೀಶರನ್ನು ಒತ್ತಾಯಿಸಿದ ಅಮೃತೇಶ್ ಅವರು, ಪೊಲೀಸರು ಆರೋಪಿಗಳ ನಿಭಾಯಿಸುವು ವಿಚಾರದಲ್ಲಿ ಸುಪ್ರೀಂ ಕೋರ್ಟ್ ಆದೇಶವನ್ನು ಉಲ್ಲಂಘಿಸಿದ್ದಾರೆ ಎಂದರು.
ಪೊಲೀಸರು ನನ್ನ ಮುಖಕ್ಕೆ ಪಂಚ್ ಮಾಡಿ, ಗೋಡೆಗೆ ತಳ್ಳಿದ್ದಾರೆ. ಹೀಗಾಗಿ ನನ್ನ ತಲೆಗೆ ಗಾಯವಾಗಿದೆ ಎಂದು ಕಾಳೆ ಆರೋಪಿಸಿದ್ದಾರೆ.
ಗೌರಿ ಹತ್ಯೆ ಪ್ರಕರಣ ಸಂಬಂಧ ಬಂಧನಕೊಳಗಾಗಿರುವ ಅಮೋಲ್ ಕಾಳೆ, ಸುಜಿತ್ ಕುಮಾರ್ ಅಲಿಯಾಸ್ ಪ್ರವೀಣ್, ಅಮಿತ್ ದೆಗ್ವೆಕರ್ ಅಲಿಯಾಸ್ ಪ್ರದೀಪ್ ಹಾಗೂ, ಮನೋಹರ್ ದುಂಡಪ್ಪ ಯಾದವ್ ಅಲಿಯಾಸ್ ಮನೋಜ್ ಅವರ ಪೊಲೀಸ್ ಬಂಧನ ಅವರ ಇಂದಿಗೆ ಮುಕ್ತಾಯವಾದ ಹಿನ್ನೆಲೆಯಲ್ಲಿ ನಾಲ್ವರು ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಲಾಯಿತು.
ವಿಚಾರಣೆ ನಡೆಸಿದ ಹೆಚ್ಚುವರಿ ಚೀಫ್ ಮೆಟ್ರೊಪೊಲಿಟನ್ ಮ್ಯಾಜಿಸ್ಟ್ರೇಟ್ ವಿ ಜಗದೀಶ್ ಅವರನ್ನು ನಾಲ್ವರು ಆರೋಪಿಗಳನ್ನು ಜೂನ್ 27ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com