ಕಬಿನಿ ಜಲಾಶಯದಿಂದ ತಮಿಳುನಾಡಿಗೆ 15,000 ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಿದ ಸರ್ಕಾರ

ಕಬಿನಿ ಜಲಾಶಯದಿಂದ ತಮಿಳುನಾಡು ರಾಜ್ಯಕ್ಕೆ 15,000 ಕ್ಯೂಸೆಕ್ಸ್ ನೀರನ್ನು ರಾಜ್ಯ ನೀರಾವರಿ ಇಲಾಖೆ ಗುರುವಾರ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ...
ಕೆ.ಆರ್ ನಗರ ತಾಲೂಕಿನಲ್ಲಿ ತುಂಬಿ ಹರಿಯುತ್ತಿರುವ ಕಾವೇರಿ ನದಿ
ಕೆ.ಆರ್ ನಗರ ತಾಲೂಕಿನಲ್ಲಿ ತುಂಬಿ ಹರಿಯುತ್ತಿರುವ ಕಾವೇರಿ ನದಿ
ಮೈಸೂರು; ಕಬಿನಿ ಜಲಾಶಯದಿಂದ ತಮಿಳುನಾಡು ರಾಜ್ಯಕ್ಕೆ 15,000 ಕ್ಯೂಸೆಕ್ಸ್ ನೀರನ್ನು ರಾಜ್ಯ ನೀರಾವರಿ ಇಲಾಖೆ ಗುರುವಾರ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ. 
ಮೈಸೂರು ಜಿಲ್ಲೆಯಲ್ಲಿ ಕೆಲ ದಿನಗಳಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು, ಇದರ ಪರಿಣಾಮ ಕಬಿನಿ ಜಲಾಶಯದ ಒಳ ಹರಿವು ಹೆಚ್ಚಾಗಿದೆ. ಜಲಾಶಯದ ಒಳ ಹರಿವು 30,000 ಕ್ಯೂಸೆಕ್ಸ್ ಆಘಿದೆ. ಜಲಾಶಯ ಪ್ರದೇಶದಲ್ಲಿ ಹೆಚ್ಚಾಗಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ 2,284 ಅಡಿ ನೀರಿನ ಸಂಗ್ರಹ ಸಾಮರ್ಥ್ಯವನ್ನು ಹೊಂದಿರುವ ಕಬಿನಿ ಅಣೆಕಟ್ಟಿನಲ್ಲಿ ಈಗಾಗಲೇ 2,280 ಅಡಿ ನೀರು ಸಂಗ್ರಹವಾಗಿದೆ. 
ಹೊರ ಹರಿವು ಗರಿಷ್ಟ ಮಟ್ಟ ತಲುಪಲು ಇನ್ನು ಕೇವಲ 4 ಸಾವಿರ ಕ್ಯೂಸೆಕ್ಸ್ ಇದ್ದು, ಈ ಹಿನ್ನಲೆಯಲ್ಲಿ ಕಬಿನಿ ಜಲಾಶಯದಿಂದ ತಮಿಳುನಾಡು ರಾಜ್ಯಕ್ಕೆ 15,000 ಕ್ಯೂಸೆಕ್ಸ್ ನೀರನ್ನು ನೀರಾವರಿ ಇಲಾಖೆ ಬಿಡುಗಡೆ ಮಾಡಿದೆ ಎಂದು ವರದಿಗಳು ತಿಳಿಸಿವೆ.
ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನಲ್ಲಿರುವ ಕಬಿನಿ ಜಲಾಶಯದಿಂದ ನೀರನ್ನು ಬಿಡುಗಡೆ ಮಾಡಲಾಗಿದೆ. ರಾಜ್ಯದಲ್ಲಿ ಈ ಬಾರಿ ಮುಂಗಾರು ಮಳೆಯ ಅಬ್ಬರ ಜೋರಾಗಿಯೇ ಇದ್ದು ಜಲಾಶಯಗಳು ತುಂಬಿ ಹರಿಯುತ್ತಿವೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಹಿ ಇಲಾಖೆ ಹೆಚ್ಚುವರಿ ನೀರನ್ನು ನದಿಗಳಿಗೆ ಬಿಡುಗಡೆ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com