ಬೆಂಗಳೂರು: ಕ್ರಿಕೆಟ್ ಆಡುವ ವಿಚಾರವಾಗಿ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಯುವನೋರ್ವ ಬರ್ಬರವಾಗಿ ಹತ್ಯೆಯಾಗಿದ್ದಾನೆ. .ಜೆಸಿ ನಗರದ ಆಟದ ಮೈದಾನದಲ್ಲಿ ಈ ಘಟನೆ ನಡೆದಿದ್ದು 22 ವರ್ಷದ ಮಣಿಕಂಠನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. .ಕ್ರಿಕೆಟ್ ಆಡುವ ವಿಚಾರವಾಗಿ ಎರಡು ಗುಂಪುಗಳ ಮಧ್ಯೆ ಜಗಳ ನಡೆದಿದ್ದು ಒಂದು ಗುಂಪಿನವರು ಬ್ಯಾಟ್, ಮಚ್ಚು ಮತ್ತು ಲಾಂಗ್ ನಿಂದ ಮಣಿಕಂಠನನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. .ಈ ಸಂಬಂಧ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ..Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics