ಪೋಷಕರು ಶನಿವಾರ ರಂಜಾನ್ ಹಿನ್ನಲೆಯಲ್ಲಿ ಸಂಬಂಧಿಕರೊಬ್ಬ ಮನೆಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಯುವಕ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಪೋಷಕರು ಶನಿವಾರ ರಾತ್ರಿ 8.30ರ ಸುಮಾರಿಗೆ ಮನೆಗೆ ವಾಪಸ್ ಆದಾಗ ಪ್ರಕರಣ ಬೆಳಗಿಗೆ ಬಂದಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಸಂಬಂಧ ಕೆ.ಜಿ.ಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.