
ಬೆಂಗಳೂರು: ಇತ್ತೀಚಿಗೆ ನಡೆದ ವಿಧಾನಪರಿಷತ್ ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿ ಆಯ್ಕೆ ವಿಚಾರದಿಂದ ಬಿಜೆಪಿ ವಿರುದ್ಧ ಅಸಮಾಧಾನ ಗೊಂಡಿರುವ ವಿಧಾನಪರಿಷತ್ ಮಾಜಿ ಸದಸ್ಯ ಪುಟ್ಟಸ್ವಾಮಿ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ .
ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಆಪ್ತರಾಗಿದ್ದರೂ ಮತ್ತೆ ವಿಧಾನಪರಿಷತ್ ಗೆ ಮರು ಆಯ್ಕೆ ಮಾಡದೆ ಇರುವುದರಿಂದ ಪುಟ್ಟಸ್ವಾಮಿ ಅಸಮಾಧಾನಗೊಂಡು ರಾಜೀನಾಮೆ ಸಲ್ಲಿಸಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಯಾವ ಕಾರಣಕ್ಕೆ ತಮ್ಮಗೆ ವಿಧಾನಪರಿಷತ್ ಸ್ಥಾನಕ್ಕೆ ನಾಮನಿರ್ದೇಶನ ಮಾಡಲಿಲ್ಲ ಎಂಬುದು ಗೊತ್ತಿದೆ. ವಿಧಾನಪರಿಷತ್ತಿನ ನಾಯಕನಾಗಲೂ ನೀವೂ ನನ್ನಗೆ ಸಲಹೆ ನೀಡಿದ್ರೀ. ಆದರೆ. ಏಕೆ ನಿಮ್ಮ ಮಾತನ್ನು ಉಳಿಸಿಕೊಳ್ಳಲಿಲ್ಲ ಎಂಬುದು ಅರ್ಥವಾಗುತ್ತಿಲ್ಲ ಎಂದು ಬಿ.ಎಸ್. ಯಡಿಯೂರಪ್ಪ ಅವರಿಗೆ ಬರೆದಿರುವ ಪತ್ರದಲ್ಲಿ ಪುಟ್ಟಸ್ವಾಮಿ ಪ್ರಶ್ನಿಸಿದ್ದಾರೆ.
ಹಿಂದಿನ ಸರ್ಕಾರದಲ್ಲಿನ ಹಗರಣಗಳನ್ನು ಬೆಳಕಿಗೆ ತರಲು ಶ್ರಮಪಟ್ಟಿದ್ದು, ಹಲವು ಸವಾಲುಗಳನ್ನು ಎದುರಿಸಿದ್ದೇನೆ. ಆದರೆ. ತಮ್ಮ ಮೇಲೆ ದಾಳಿ ಆದಾಗ ಯಾರೂ ಕೂಡಾ ಸಹಾಯಕ್ಕೆ ಬರಲಿಲ್ಲ. ಸ್ವಾರ್ಥದಿಂದ ಕೆಲಸ ಮಾಡಲಿಲ್ಲ, 45 ವರ್ಷ ಪಕ್ಷದ ಸಂಘಟನೆಗಾಗಿ ಕೆಲಸ ಮಾಡಿರುವುದಾಗಿ ಪುಟ್ಟಸ್ವಾಮಿ ಹೇಳಿದ್ದಾರೆ.
ಆದರೆ, ಪುಟ್ಟಸ್ವಾಮಿ ರಾಜೀನಾಮೆ ಬಗ್ಗೆ ಪ್ರತಿಕ್ರಿಯೆ ನೀಡಲು ಬಿ.ಎಸ್. ಯಡಿಯೂರಪ್ಪ ನಿರಾಕರಿಸಿದ್ದಾರೆ.
Advertisement