ಇಂಜಿನಿಯರಿಂಗ್ ವಿದ್ಯಾರ್ಥಿಗಳು 20 ನಿಮಿಷ ಮೊದಲೇ ಪರೀಕ್ಷೆಗೆ ಹಾಜರಿರಬೇಕು

ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯ ಅನುದಾನಿತ ರಾಜ್ಯದ ಎಲ್ಲ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಇನ್ನು ಮುಂದೆ ಪರೀಕ್ಷೆಗೆ 20 ನಿಮಿಷ ಮೊದಲೇ ಹಾಜರಿರಬೇಕು ಎಂದು ಆದೇಶ ನೀಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ವಿಶ್ವೇಶ್ವರಾಯ ತಾಂತ್ರಿಕ ವಿಶ್ವವಿದ್ಯಾಲಯ ಅನುದಾನಿತ ರಾಜ್ಯದ ಎಲ್ಲ ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳು ಇನ್ನು ಮುಂದೆ ಪರೀಕ್ಷೆಗೆ 20 ನಿಮಿಷ ಮೊದಲೇ ಹಾಜರಿರಬೇಕು ಎಂದು ಆದೇಶ ನೀಡಲಾಗಿದೆ.
ಪರೀಕ್ಷೆ ಬರೆಯುವ ಎಲ್ಲ ಇಂಜಿನಿಯರಿಂಗ್ ವಿದ್ಯಾರ್ಥಿಗಳು ಇನ್ನು ಮುಂದೆ ಕಡ್ಡಾಯವಾಗಿ 20 ನಿಮಿಷ ಮೊದಲೇ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರಬೇಕು ಎಂದು ವಿಟಿಯು ಆದೇಶ ಹೊರಡಿಸಿದೆ. ಅಂತೆಯೇ ಪರೀಕ್ಷೆಗೆ ತಡವಾಗಿ ಬರುವ ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಪರೀಕ್ಷೆ ಬರೆಯುವ ಅವಕಾಶ ನೀಡುವುದಿಲ್ಲ ಎಂದೂ ಎಚ್ಚರಿಕೆ ನೀಡಿದೆ. ಈ ಕುರಿತು ತನ್ನ ಅಧೀನದಲ್ಲಿ ಬರುವ ಅಂದರೆ ವಿಟಿಯು ಅನುದಾನಿತ ಎಲ್ಲ ಕಾಲೇಜುಗಳಿಗೂ ವಿಟಿಯು ಸುತ್ತೋಲೆ ಹೊರಡಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ವಿಟಿಯು ಅಧಿಕಾರಿಗಳು ವಿಶ್ವವಿದ್ಯಾಲಯಗಳ ಪ್ರಾಧಿಕಾರ ಈ ಬಗ್ಗೆ ಗಂಭೀರ ಚರ್ಚೆ ನಡೆಸಿ ನಿರ್ಧಾರ ಕೈಗೊಂಡಿದೆ. ಪರೀಕ್ಷೆಗಳನ್ನು ಗಂಭೀರವಾಗಿ ಮತ್ತು ಕಠಿಣವಾಗಿ ಆಯೋಜನೆ ಮಾಡಲು ನಿರ್ಧರಿಸಿದೆ. ಪ್ರಮುಖವಾಗಿ ಇತ್ತೀಚೆಗೆ ಕೇಳಿಬಂದ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದಾಗಿ ಪ್ರಾಧಿಕಾರ ಇಂತಹ ನಿರ್ಧಾರ ಕೈಗೊಂಡಿದೆ ಎನ್ನಲಾಗಿದೆ. 
ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಪ್ರತಿನಿಧಿಯೊಂದಿಗೆ ಮಾತನಾಡಿದ ವಿಟಿಯು ಹಿರಿಯ ಅಧಿಕಾರಿಯೊಬ್ಬರು, ತಡವಾಗಿ ಪರೀಕ್ಷೆಗೆ ಆಗಮಿಸುವ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡುತ್ತಿರುವ ಕುರಿತು ನಮಗೆ ಶಂಕೆ ವ್ಯಕ್ತವಾಗಿದೆ. ಇದೇ ಕಾರಣಕ್ಕೆ ಪರೀಕ್ಷೆ ಆರಂಭವಾಗುವ 20 ನಿಮಿಷ ಮೊದಲು ಪರೀಕ್ಷೆ ಬರೆಯುವ ಎಲ್ಲ ವಿದ್ಯಾರ್ಥಿಗಳಾ ಪರೀಕ್ಷಾ ಕೇಂದ್ರಕ್ಕೆ ಹಾಜರಿರಬೇಕು. ತಡವಾಗಿ ಬಂದರೆ ಪರೀಕ್ಷೆಗೆ ಕೂರಿಸುವುದಿಲ್ಲ ಎಂದು ಹೇಳಿದ್ದಾರೆ. ಅಂತೆಯೇ ಟ್ರಾಫಿಕ್ ಮತ್ತು ಇನ್ನಿತರೆ ಸಮಸ್ಯೆಗಳಿಂದಾಗಿ ವಿದ್ಯಾರ್ಥಿಗಳು ಅರ್ಧಗಂಟೆ ಸಮಯ ನೀಡುವಂತೆ ಕೇಳುತ್ತಿದ್ದಾರೆ. ಆದರೆ ಇಂತಹ ಗಂಭೀರ ಸಮಸ್ಯೆಗಳನ್ನು ಹತ್ತಿಕ್ಕಲು ಇಂತರ ಕಠಿಣ ನಿರ್ಧಾರ ಅಗತ್ಯ, ವಿದ್ಯಾರ್ಥಿಗಳು ಬೇಗನೇ ಮನೆಯಿಂದ ತೆರಳ ಬೇಕು ಎಂದು ಸಲಹೆ ನೀಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com