ಹಿರಿಯೂರು: ನಿಂತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಐವರು ಮೃತಪಟ್ಟ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜವಗೊಂಡನಹಳ್ಳಿ ಬಳಿ ನಡೆದಿದೆ.
ಸದ್ಧಾಂ ಹುಸೇನ್(22), ಸದ್ಧಾಂ(21), ತೌಸಿಫ್ ಅಹಮ್ಮದ್(24), ಶಾರೂಕ್ (20) ಮೃತರು. ಮತ್ತೊಬ್ಬ ಆಸೀಫ್ ಎಂಬಾತ ಚಿತ್ರದುರ್ಗ ಆಸ್ರತ್ರೆಯಲ್ಲಿ ಸಾವನ್ನಪ್ಪಿದ್ದಾನೆ.ನಾಲ್ಕರು ಗಾಯಗೊಂಡಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಗೋವಾ ಪ್ರವಾಸ ಮುಗಿಸಿದ ಯುವಕರು ತಮಿಳುನಾಡಿಗೆ ಕಾರಿನಲ್ಲಿ ಮರಳುತ್ತಿದ್ದರು. ಬುಧವಾರ ನಸುಕಿನ 1.30ರ ಸುಮಾರಿನಲ್ಲಿ ಈ ಅಪಘಾತ ಸಂಭವಿಸಿದೆ. ಸ್ಥಳಕ್ಕೆ ಹಿರಿಯೂರು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಮೃತರು ತಮಿಳುನಾಡು ರಾಜ್ಯದ ಮೂಲದವರಾಗಿದ್ದು ಹಿರಿಯೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.