ಜುಲೈ 5 ರಿಂದ ಶಿರಾಡಿ ಘಾಟ್ ಸಂಚಾರಕ್ಕೆ ಮುಕ್ತ-ಎಚ್. ಡಿ. ರೇವಣ್ಣ
ಬೆಂಗಳೂರಿನಿಂದ ಮಂಗಳೂರು ಮಾರ್ಗವಾಗಿ ತೆರಳುವ ಪ್ರಯಾಣಿಕರಿಗೆ ಸಂತಸ ಸುದ್ದಿ. ರಸ್ತೆ ಕಾಂಕ್ರಿಟ್ ಗಾಗಿ ಐದು ತಿಂಗಳಿನಿಂದ ಮುಚ್ಚಲಾಗಿದ್ದ ಶಿರಾಡಿಘಾಟ್ ಮಾರ್ಗವನ್ನು ಜುಲೈ 5 ರಿಂದ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್. ಡಿ. ರೇವಣ್ಣ ತಿಳಿಸಿದ್ದಾರೆ.
ಮಂಗಳೂರು: ಬೆಂಗಳೂರಿನಿಂದ ಮಂಗಳೂರು ಮಾರ್ಗವಾಗಿ ತೆರಳುವ ಪ್ರಯಾಣಿಕರಿಗೆ ಸಂತಸ ಸುದ್ದಿ. ರಸ್ತೆ ಕಾಂಕ್ರಿಟ್ ಗಾಗಿ ಐದು ತಿಂಗಳಿನಿಂದ ಮುಚ್ಚಲಾಗಿದ್ದ ಶಿರಾಡಿಘಾಟ್ ಮಾರ್ಗವನ್ನು ಜುಲೈ 5 ರಿಂದ ಸಂಚಾರಕ್ಕೆ ಮುಕ್ತಗೊಳಿಸಲಾಗುವುದು ಎಂದು ಲೋಕೋಪಯೋಗಿ ಸಚಿವ ಎಚ್. ಡಿ. ರೇವಣ್ಣ ತಿಳಿಸಿದ್ದಾರೆ.
ರಸ್ತೆ ಕಾಮಗಾರಿ ಪರಿಶೀಲನೆ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 13 ಕಿಲೋ ಮೀಟರ್ ದೂರದ ರಸ್ತೆಯನ್ನು ಬಂದ್ ಮಾಡಿರುವುದರಿಂದ ಪರ್ಯಾಯ ಮಾರ್ಗಗಳಲ್ಲಿ ಚಾರ್ಮಾಡಿ ರಸ್ತೆ ಹಾಗೂ ಮಡಿಕೇರಿ ರಸ್ತೆಗಳಲ್ಲಿ ತೆರಳುವ ಸಾವಿರಾರು ಪ್ರಯಾಣಿಕರು ಪ್ರತಿನಿತ್ಯ ತೊಂದರೆ ಎದುರಿಸುವಂತಾಗಿದೆ.
ಚಾಮಾರ್ಡಿ ಘಾಟ್ ಬಳಿ ಕೆಳೆದ ವಾರ ಸುರಿದ ಭಾರಿ ಮಳೆಯಿಂದಾಗಿ 9 ತಿರುವುಗಳಲ್ಲಿ ಭೂ ಕುಸಿತ ಉಂಟಾಗಿತ್ತು. ಎರಡು ದಿನ ಈ ಮಾರ್ಗದಲ್ಲಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿತ್ತು. ಇದು ಕರಾವಳಿ ಹಾಗೂ ರಾಜಧಾನಿ ಬೆಂಗಳೂರು ಮತ್ತಿತರ ಸ್ಥಳಗಳಿಗೆ ತೆರಳಬೇಕಾದ ಪ್ರಯಾಣಿಕರ ಪ್ರಮುಖ ಸಮಸ್ಯೆಯಾಗಿದೆ.
ಕೆಲ ವಾರದ ಹಿಂದೆಯೇ ಶಿರಾಡಿ ಘಾಟ್ ರಸ್ತೆ ಕಾಮಗಾರಿ ಪೂರ್ಣಗೊಳ್ಳಬೇಕಾಗಿತ್ತು. ಆದರೆ, ಭಾರೀ ಮಳೆಯಿಂದಾಗಿ ವಿಳಂಬವಾಗುತ್ತಿದೆ. ಚಾಮಾರ್ಡಿ ರಸ್ತೆ ಅಭಿವೃದ್ದಿಗಾಗಿ 250 ಕೋಟಿ ರೂಪಾಯಿ ಬಿಡುಗಡೆ ಮಾಡುವಂತೆ ಕೇಂದ್ರಸರ್ಕಾರಕ್ಕೆ ಶೀಘ್ರವೇ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಎಚ್. ಡಿ. ರೇವಣ್ಣ ತಿಳಿಸಿದರು.
ಪುತ್ತೂರು ಶಾಸಕ ಸಂಜಿವ್ ಮತಂದೂರು ಪ್ರಯಾಣಿಕರ ಸಮಸ್ಯೆಗಳ ಬಗ್ಗೆ ವಿವರಿಸಿದರು. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಂಡಿ ಮುಚ್ಚುವ ಕಾರ್ಯಗಳನ್ನು ಆದ್ಯತೆ ಮೇರೆಗೆ ಕೈಗೊಂಡು ಈ ತಿಂಗಳಲ್ಲಿಯೇ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ರೇವಣ್ಣ ನಿರ್ದೇಶನ ನೀಡಿದರು.
ಬಿಸಿ ರಸ್ತೆಯಿಂದ ಸುಳ್ಯವರೆಗೂ ಅರಣ್ಯ ಇಲಾಖೆ ಸಹಯೋಗದಲ್ಲಿ ಒಳಚರಂಡಿ ಕಾಮಗಾರಿ ಕೈಗೊಳ್ಳುವಂತೆಯೂ ಅಧಿಕಾರಿಗಳಿಗೆ ಸೂಚನೆ ನೀಡಿದರು.