3 ತಿಂಗಳೊಳಗಾಗಿ ಎಲ್ಲಾ ನೇಮಕಾತಿಗಳನ್ನು ಪೂರ್ಣಗೊಳಿಸಿ: ಸರ್ಕಾರಿ ಇಲಾಖೆಗಳಿಗೆ ಸೂಚನೆ

ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು 3 ತಿಂಗಳುಗಳ ಒಳಗಾಗಿ ಭರ್ತಿ ಮಾಡುವಂತೆ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಸ್ವ-ನಿಯಂತ್ರಿತ ಸಂಸ್ಥೆಗಳಿಗೆ ಸರ್ಕಾರ ಸೂಚನೆ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಕಲಬುರಗಿ: ಸರ್ಕಾರಿ ಇಲಾಖೆಗಳಲ್ಲಿ ಖಾಲಿ ಇರುವ ಎಲ್ಲಾ ಹುದ್ದೆಗಳನ್ನು 3 ತಿಂಗಳುಗಳ ಒಳಗಾಗಿ ಭರ್ತಿ ಮಾಡುವಂತೆ ಎಲ್ಲಾ ಸರ್ಕಾರಿ, ಅರೆ ಸರ್ಕಾರಿ, ಸ್ವ-ನಿಯಂತ್ರಿತ ಸಂಸ್ಥೆಗಳಿಗೆ ಸರ್ಕಾರ ಸೂಚನೆ ನೀಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. 
ಹೊರಗುತ್ತಿಗೆಯೂ ಸೇರಿದೆತೆ ರಾಜ್ಯ ಸರ್ಕಾರದ ವೃಂದ ಮತ್ತು ನೇಮಕ ಸಂದರ್ಭದಲ್ಲಿ ಹೈದರಾಬಾದ್-ಕರ್ನಾಟಕ ವಿಶೇಷ ಸ್ಥಾನಮಾನ 371ಜೆ ಅನ್ವಯ ಮೀಸಲು ನಿರ್ಧಾರ ಕಡ್ಡಾಯವಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭ ಅವರು ಎಲ್ಲಾ ಸರ್ಕಾರಿ ಇಲಾಖೆಗಳಿಗೆ ಸುತ್ತೋಲೆಯನ್ನು ಹೊರಡಿಸಿದ್ದಾರೆಂದು ವರದಿಗಳು ತಿಳಿಸಿವೆ. 
ರಾಜ್ಯ ಸರ್ಕಾರದ ಎಲ್ಲಾ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳು, ಇಲಾಖಾ ಮುಖ್ಯಸ್ಥರು ಹಾಗೂ ಪ್ರಾದೇಶಿಕ ಆಯುಕ್ತರುಗಳಿಗೆ ಸುತ್ತೋಲೆಯನ್ನು ರವಾನಿಸಲಾಗಿದ್ದು, 371ಜೆ ಅನ್ವಯ ನೀಡುವ ಮೀಸಲು ಸೌಲಭ್ಯ ಸರ್ಕಾರದ ಕಾಯಂ, ತಾತ್ಕಾಲಿಕ, ಗುತ್ತಿಗೆ, ನಿಯೋಜನೆ ಹಾಗೂ ಹೊರಗುತ್ತಿಗೆ ಹುದ್ದೆಗಳು ಅನ್ವಯಗೊಳ್ಳುತ್ತವೆ. ವೃಂದ-ನೇಮಕ ನಿಯಮ ಪ್ರಕಾರ ನಿಯೋಜನೆಗೆ ಒಳಪಡುವ ಎಸ್-ಕೇಡರ್ ಹಾಗೂ ಎನ್-ಕೇಡರ್ ಹುದ್ದೆಗಳಿಗೂ ಈ ಸೌಲಭ್ಯವನ್ನು ಗಣನೆಗೆ ತೆಗೆದುಕೊಂಡು ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕಾಗುತ್ತದೆ ಎಂದು ಸುತ್ತೋಲೆಯಲ್ಲಿ ನಿರ್ದೇಶಿಸಲಾಗಿದೆ ಎಂದು ತಿಳಿದುಬಂದಿದೆ. 
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ರಾಜ್ಯ ಮುಖ್ಯಕಾರ್ಯದರ್ಶಿ ರತ್ನಪ್ರಭ ಅವರು, ಸರ್ಕಾರಿ ಇಲಾಖೆಗಳಲ್ಲಿ ಮಾತ್ರ 371 (ಜೆ) ನಿಯಮಗಳನ್ನು ಜಾರಿಗೆ ತಂದಿದ್ದು, ಇದರಂತೆ ಗಣನೀಯ ಪ್ರಮಾಣದಲ್ಲಿ ನೇಮಕಾತಿಗಳನ್ನು ಮಾಡಿದೆ. ಆದರೆ, ಅರೆ ಸರ್ಕಾರಿ ಸಂಸ್ಥೆಗಳು ಹಾಗೂ ಸ್ವಾಯತ್ತ ಸಂಸ್ಥೆಗಳು ವಿಳಂಬ ನೀತಿಗಳನ್ನು ಅನುಸರಿಸುತ್ತಿವೆ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com