ಬಿಜೆಪಿ ಮುಖಂಡ ಅನ್ವರ್ ಹತ್ಯೆ ಖಂಡಿಸಿ ಚಿಕ್ಕಮಗಳೂರಿನಲ್ಲಿ ಪ್ರತಿಭಟನೆ

ಚಿಕ್ಕಮಗಳೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅನ್ವರ್ ಅವರ ಹತ್ಯೆ ಖಂಡಿಸಿ ಶನಿವಾರ...
ಅನ್ವರ್ ಸಹೋದರನನ್ನು ಸಂತೈಸುತ್ತಿರುವ ಸಿಟಿ ರವಿ
ಅನ್ವರ್ ಸಹೋದರನನ್ನು ಸಂತೈಸುತ್ತಿರುವ ಸಿಟಿ ರವಿ
Updated on: 
ಚಿಕ್ಕಮಗಳೂರು: ಚಿಕ್ಕಮಗಳೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಅನ್ವರ್ ಅವರ ಹತ್ಯೆ ಖಂಡಿಸಿ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
40 ವರ್ಷದ ಮೊಹಮ್ಮದ್ ಅನ್ವರ್ ಅವರನ್ನು ನಿನ್ನೆ ರಾತ್ರಿ 9.30ರ ಸುಮಾರಿಗೆ ಬೈಕ್ ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ಚೂರಿಯಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದರು.
ಇಂದು ಅನ್ವರ್ ಹತ್ಯೆ ಖಂಡಿಸಿ ಜಿಲ್ಲಾ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ನಗರದಲ್ಲಿ ಪ್ರತಿಭಟನೆ ನಡೆಸಿದರು. 
ಕರಾವಳಿ ಪ್ರದೇಶದಲ್ಲಿ ಬಿಜೆಪಿ ಕಾರ್ಯಕರ್ತರನ್ನು ಹತ್ಯೆ ಮಾಡಲಾಗುತ್ತಿದ್ದು, ಇದರಲ್ಲಿ ವೃತ್ತಿಪರ ಕೊಲೆಗಡುಕರ ಕೈವಾಡವಿದೆ ಎಂದು ಬಿಜೆಪಿ ಶಾಸಕ ಸಿಟಿ ರವಿ ಅವರು ಆರೋಪಿಸಿದ್ದಾರೆ.
ಚಿಕ್ಕಮಗಳೂರಿನ ಗೌರಿ ಕಾಲುವೆ ಬಳಿ ಮೊಹಮ್ಮದ್ ಅನ್ವರ್ ಅವರನ್ನು ದುಷ್ಕರ್ಮಿಗಳು ಚೂರಿಯಿಂದ 13 ಬಾರಿ ಇರಿದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಅನ್ವರ್ ಅವರು ಸಹೋದರ ಕಬೀರ್ ಅವರು ನೀಡಿದ ದೂರಿನ ಆಧಾರದ ಮೇಲೆ ಪೊಲೀಸರು ಐವರು ವಿರುದ್ಧ ಎಫ್ಐಆರ್ ದಾಖಲಿಸಿದ್ದು, ಇಬ್ಬರು ಆರೋಪಿಗಳನ್ನು ಯೂಸುಫ್ ಹಜಿ ಮತ್ತು ಆಸೀಫ್ ಎಂದು ಗುರುತಿಸಲಾಗಿದೆ.
ಹಳೇ ದ್ವೇಷದ ಹಿನ್ನೆಲೆಯಲ್ಲಿ ಅನ್ವರ್ ನನ್ನು ಕೊಲೆ ಮಾಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com