ಪ್ರಯಾಣ ದರ ಹೆಚ್ಚಳದಿಂದ ಮೆಟ್ರೋ ಕಾರ್ಯಕ್ಷಮತೆಗೆ ನೆರವು- ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ

ಮೆಟ್ರೋ ರೈಲು ಪ್ರಯಾಣ ದರವನ್ನು ಕೇಂದ್ರ ವಸತಿ ಮತ್ತು ನಗರಾಭಿವೃದ್ದಿ ಸಚಿವ ಹರ್ದೀಪ್ ಸಿಂಗ್ ಪುರಿ ಸಮರ್ಥಿಸಿಕೊಂಡಿದ್ದು, ಪ್ರಯಾಣದರ ಹೆಚ್ಚಳದಿಂದ ಸಾರ್ವಜನಿಕ ಸಂಚಾರ ವ್ಯವಸ್ಥೆ ಕಾರ್ಯಕ್ಷಮತೆ ಹಾಗೂ ಸುರಕ್ಷತೆಗೆ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.
ಆರು ಬೋಗಿ ರೈಲಿನಲ್ಲಿ ಸಂಚರಿಸಿದ ಕೇಂದ್ರಸಚಿವ ಹರ್ದೀಪ್ ಸಿಂಗ್ ಪುರಿ , ಎಚ್. ಡಿ. ಕುಮಾರಸ್ವಾಮಿ, ಪರಮೇಶ್ವರ್ ಮತ್ತಿತರರು
ಆರು ಬೋಗಿ ರೈಲಿನಲ್ಲಿ ಸಂಚರಿಸಿದ ಕೇಂದ್ರಸಚಿವ ಹರ್ದೀಪ್ ಸಿಂಗ್ ಪುರಿ , ಎಚ್. ಡಿ. ಕುಮಾರಸ್ವಾಮಿ, ಪರಮೇಶ್ವರ್ ಮತ್ತಿತರರು
ಬೆಂಗಳೂರು: ಮೆಟ್ರೋ ರೈಲು ಪ್ರಯಾಣ ದರವನ್ನು ಕೇಂದ್ರ ವಸತಿ ಮತ್ತು ನಗರಾಭಿವೃದ್ದಿ ಸಚಿವ ಹರ್ದೀಪ್ ಸಿಂಗ್ ಪುರಿ ಸಮರ್ಥಿಸಿಕೊಂಡಿದ್ದು, ಪ್ರಯಾಣದರ ಹೆಚ್ಚಳದಿಂದ  ಸಾರ್ವಜನಿಕ ಸಂಚಾರ ವ್ಯವಸ್ಥೆ ಕಾರ್ಯಕ್ಷಮತೆ ಹಾಗೂ ಸುರಕ್ಷತೆಗೆ ನೆರವಾಗಲಿದೆ ಎಂದು ಅವರು ಹೇಳಿದ್ದಾರೆ.
ಮೆಟ್ರೋ ರೈಲಿಗೆ ಆರು ಕಾರು ಅಳವಡಿಕೆ ಕಾರ್ಯಕ್ರಮದ ಅಂಗವಾಗಿ ಕೆಂಪೇಗೌಡ ನಿಲ್ದಾಣದಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ದೇಶದಲ್ಲಿನ  ಮೆಟ್ರೋ ಸೇವೆ  ವಿಶ್ವ ಗುಣಮಟ್ಟದ ಸೌಕರ್ಯಗಳನ್ನು ಹೊಂದಿರುವುದಾಗಿ ತಿಳಿಸಿದರು.
280 ಕಿಲೋ ಮೀಟರ್ ದೂರ   ವ್ಯಾಪಿಸಿರುವ ದೆಹಲಿ ಮೆಟ್ರೋ ಇಡೀ ವಿಶ್ವದಲ್ಲಿಯೇ ನಾಲ್ಕನೇಯದಾಗಿದೆ . ಬೆಂಗಳೂರಿನಲ್ಲಿ ಮೆಟ್ರೋ ರೈಲಿನಲ್ಲಿ ಸಂಚರಿಸಲು ಪ್ರಯಾಣಿಕರ ಸಂಖ್ಯೆ 2 ಲಕ್ಷಕ್ಕಿಂತಲೂ ಹೆಚ್ಚಿದೆ ಎಂದರು.
ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಮಾತನಾಡಿ, ಮೆಟ್ರೋ ಎರಡನೇ ಹಂತ ಪೂರ್ಣಗೊಂಡ ಬಳಿಕ ರೈಲಿನಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ 20 ಲಕ್ಷ ದಾಟಲಿದೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com