ಸಾರ್ವತ್ರಿಕ ವರ್ಗಾವಣೆಗಳನ್ನು ಪ್ರತಿ ವರ್ಷ ಮೇ ಮತ್ತು ಜೂನ್ ತಿಂಗಳಲ್ಲಿ ಮಾಡಬೇಕು ಎಂಬ ನಿಯಮ ಇದೆಯಾದರೂ ಈ ಬಾರಿ ವಿಧಾನಸಭೆ ಚುನಾವಣೆ, ನಂತರ ಸರ್ಕಾರ ರಚನೆಯಲ್ಲಿ ಉಂಟಾದ ಗೊಂದಲದಿಂದಾಗಿ ಇದುವರೆಗೆ ವರ್ಗಾವಣೆಗೆ ಅವಕಾಶ ನೀಡಿರಲಿಲ್ಲ. ಈ ಮಧ್ಯೆ ಚುನಾವಣಾ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಅಧಿಕಾರಿಗಳು ಮತ್ತೆ ಮಾತೃಸಂಸ್ಥೆಯಲ್ಲಿ ಕೆಲಸ ಆರಂಭಿಸಬೇಕಿತ್ತು. ಈ ಎಲ್ಲಾ ಕಾರಣಗಳಿಂದಾಗಿ ವಿಳಂಬವಾದ ವರ್ಗಾವಣೆ ಪ್ರಕ್ರಿಯೆಯನ್ನು ಇದೀಗ ಆರಂಭಿಸಲಾಗುತ್ತಿದೆ ಎಂದು ತಿಳಿಸಿದರು.