ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರು: ವಿವಾದ ಹುಟ್ಟು ಹಾಕಿದ ಜಮೀರ್ ಹೇಳಿಕೆ

: ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರು ನಾಮಕರಣ ಮಾಡುವ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು ವಿವಾದ ...
ಹಜ್ ಭವನ
ಹಜ್ ಭವನ
ಬೆಂಗಳೂರು: ಹಜ್ ಭವನಕ್ಕೆ ಟಿಪ್ಪು ಸುಲ್ತಾನ್ ಹೆಸರು ನಾಮಕರಣ ಮಾಡುವ ಸಚಿವ ಜಮೀರ್ ಅಹ್ಮದ್ ಖಾನ್ ಪ್ರಸ್ತಾವನೆಗೆ ತೀವ್ರ ವಿರೋಧ ವ್ಯಕ್ತವಾಗಿದ್ದು ವಿವಾದ ಹುಟ್ಟು ಹಾಕಿದೆ.
ಹಜ್‌ ಭವನಕ್ಕೆ ಟಿಪ್ಪು ಸುಲ್ತಾನ್‌ ಹೆಸರು ನಾಮಕರಣ ಮಾಡುವ ಪ್ರಸ್ತಾವನೆ ಬಂದಿದೆ. ಈ ಸಂಬಂಧ ಸಿಎಂ ಕುಮಾರ ಸ್ವಾಮಿ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡರ ಜೊತೆ ಚರ್ಚಿಸಬೇಕು ಎಂದು ಜಮೀರ್ ಹೇಳಿದ್ದಾರೆ. ಇದೊಂದು ಸ್ವತಂತ್ರ್ಯ ಸಂಸ್ಥೆಯಾಗಿದ್ದು, ಟಿಪ್ಪು ಹೆಸರಿಡಬೇಕೆಂಬ ಪ್ರಸ್ತಾವನೆ ಬಂದಿದೆ. ಟಿಪ್ಪು ಸುಲ್ತಾನ್ ಘರ್ ಎಂದು ಹೆಸರಿಡುವುದರಿಂದ ಯಾವುದೇ ತಪ್ಪಿಲ್ಲ ಎಂದು ಜಮೀರ್ ಹೇಳಿದ್ದಾರೆ.
"ಟಿಪ್ಪು ಓರ್ವ ಮತಾಂಧ, ಹಿಂದೂ ದೇವಾಲಯಗಳನ್ನು ನಾಶಪಡಿಸಿದ್ದಾನೆ. ಹಿಂದುಗಳನ್ನು ಮತಾಂತರ ಮಾಡಿದ್ದಾನೆ. . ಹೀಗಾಗಿ ಸಮ್ಮಿಶ್ರ ಸರ್ಕಾರ ಟಿಪ್ಪು ಜಯಂತಿ ಆಚರಣೆ ಮಾಡಬಾರದು. ಭವನಕ್ಕೂ ಟಿಪ್ಪು ಹೆಸರಿಡಬಾರದು'' ಎಂದು ಮಾಜಿ ಡಿಸಿಎಂ ಆರ್ ಅಶೋಕ್ ಆಗ್ರಹಿಸಿದ್ದಾರೆ.
ಹಜ್‌ ಭವನಕ್ಕೆ ಸರ್ಕಾರದಿಂದ ಟಿಪ್ಪು ಸುಲ್ತಾನ್‌ ಅವರ ಹೆಸರಿಟ್ಟರೆ ರಾಜ್ಯಾದ್ಯಂತ ಉಗ್ರಹೋರಾಟ ನಡೆಸಲಿದ್ದೇವೆ ಎಂದು ಸಂಸದೆ ಹಾಗೂ ಬಿಜೆಪಿ ರಾಜ್ಯಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ'' ಎಚ್ಚರಿಕೆ ನೀಡಿದ್ದಾರೆ.
"ಹಜ್‌ ಭವನಕ್ಕೆ ಟಿಪ್ಪು ಸುಲ್ತಾನ್‌ ಹೆಸರು ನಾಮಕರಣ ಮಾಡಿದರೆ ಉಗ್ರ ಹೋರಾಟ ನಡೆಸಲಾಗುವುದು. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹಾದಿಯಲ್ಲೇ ಸಮ್ಮಿಶ್ರ ಸರ್ಕಾರ ಸಾಗುತ್ತಿದೆ. ಹಿಂದಿನ ಕಾಂಗ್ರೆಸ್‌ ಸರ್ಕಾರ, ಟಿಪ್ಪು ಜಯಂತಿ ಆಚರಿಸಿ, ಚುನಾವಣೆಯಲ್ಲಿ 80 ಸೀಟಿಗೆ ಇಳಿದಿದೆ. ಯಾರಿಗೂ ಬೇಡವಾದ ಟಿಪ್ಪು ಬಗ್ಗೆ ಸಮ್ಮಿಶ್ರ ಸರ್ಕಾರಕ್ಕೆ ಯಾಕಿಷ್ಟು ಆಸಕ್ತಿ ಎಂಬುದು ತಿಳಿಯುತ್ತಿಲ್ಲ'' ಎಂದರು.
ಹಜ್‌ ಭವನ ನಿರ್ಮಾಣ 2010ರಲ್ಲಿ ಮುಖ್ಯಮಂತ್ರಿಯಾಗಿದ್ದ ಬಿ.ಎಸ್‌.ಯಡಿಯೂರಪ್ಪ ಅವರು 40 ಕೋಟಿ ಅನುದಾನ ಮೀಸಲಿಟ್ಟಿದ್ದರು. 2011ರಲ್ಲಿ ಮುಖ್ಯಮಂತ್ರಿಯಾಗಿದ್ದ ಡಿ.ವಿ.ಸದಾನಂದ ಗೌಡ ಅವರು ಹಣ ಮಂಜೂರು ಮಾಡಿದ್ದರು. ಸುಮಾರು 60 ಕೋಟಿ ರೂ ಯೋಜನೆ ಇದಾಗಿದ್ದು ಹಲವರು ಇದರ ಲಾಭ ಪಡೆದಿದ್ದಾರೆ ಎಂದು ಶೋಭಾ ಕರಂದ್ಲಾಜೆ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com