ಪ್ರಶ್ನೆ ಪತ್ರಿಕೆ ಸೋರಿಕೆ: ಮರುಪರೀಕ್ಷೆ ನಡೆಸಲಿರುವ ವಿಟಿಯು

ಜೂ.22 ರಂದು ನಡೆದ ವಿಟಿಯು ಪರೀಕ್ಷೆಯಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ 4 ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಮರುಪರೀಕ್ಷೆ ನಡೆಸಲು ವಿಟಿಯು ನಿರ್ಧರಿಸಿದೆ.
ಪ್ರಶ್ನೆ ಪತ್ರಿಕೆ ಸೋರಿಕೆ: ಮರುಪರೀಕ್ಷೆ ನಡೆಸಲಿರುವ ವಿಟಿಯು
ಪ್ರಶ್ನೆ ಪತ್ರಿಕೆ ಸೋರಿಕೆ: ಮರುಪರೀಕ್ಷೆ ನಡೆಸಲಿರುವ ವಿಟಿಯು
ಬೆಂಗಳೂರು: ಜೂ.22 ರಂದು ನಡೆದ ವಿಟಿಯು ಪರೀಕ್ಷೆಯಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗದ 4 ನೇ ಸೆಮಿಸ್ಟರ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಮರುಪರೀಕ್ಷೆ ನಡೆಸಲು ವಿಟಿಯು ನಿರ್ಧರಿಸಿದೆ. 
ರಾಜ್ಯಾದ್ಯಂತ ಪರೀಕ್ಷೆ ನಡೆದ ನಂತರ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವುದು ಬಹಿರಂಗವಾಗಿದೆ. ಸಾಮಾಜಿಕ ಜಾಲತಾಣದ ಮೂಲಕ ಸೋರಿಕೆಯಾಗಿದ್ದನ್ನು ಪರಿಶೀಲಿಸಿರುವ ವಿಟಿಯು ಅಧಿಕಾರಿಗಳು ಸಿವಿಲ್ ಇಂಜಿನಿಯರಿಂಗ್ ನ 4 ನೇ ಸೆಮಿಸ್ಟರ್ ಪರೀಕ್ಷೆಯನ್ನು ರದ್ದುಗೊಳಿಸಿದ್ದಾರೆ. ಆದರೆ ಮರುಪರೀಕ್ಷೆಯ ದಿನಾಂಕದ ಬಗ್ಗೆ ಸ್ಪಷ್ಟ ಮಾಹಿತಿ ನೀಡಿಲ್ಲ. 
ಜೂ.22 ರಂದು ಮಧ್ಯರಾತ್ರಿ ವಿಟಿಯು ಅಧಿಕಾರಿಗಳಿಗೆ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮಾಹಿತಿ ದೊರೆತಿದ್ದು, ಆತಂಕಗೊಂಡ ಅಧಿಕಾರಿಗಳು ಸೋರಿಕೆಯಾದ ಪ್ರಶ್ನೆಪತ್ರಿಕೆಯನ್ನು  ಪರಿಶೀಲಿಸಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಖಾತ್ರಿಯಾಗಿದೆ. 
ಬೆಳಗಾವಿ ಭಾಗದಲ್ಲಿರುವ ಖಾಸಗಿ ಇಂಜಿನಿಯರಿಂಗ್ ಕಾಲೇಜಿನ ಹಿರಿಯ ಪ್ರೊಫೆಸರ್ ಒಬ್ಬರಿಂದ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬುದು ವಿವಿ ಅಧಿಕಾರಿಗಳ ಗಮನಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ನಿರ್ದಿಷ್ಟ ವಿಷಯಕ್ಕೆ ಮರುಪರೀಕ್ಷೆ ನಡೆಸಲಾಗುವುದು ಎಂದು ವಿಟಿಯು ರಿಜಿಸ್ಟಾರ್ ಪ್ರೊ.ಹೆಚ್ ಎನ್ ಜಗನ್ ನಾಥ್ ರೆಡ್ಡಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com