ಈ ಸಂಬಂಧ ಇಂದು ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆ ಶಿವಕುಮಾರ್, ಕಾವೇರಿ ನೀರು ನಿರ್ವಹಣಾ ಮಂಡಳಿಗೆ ಜಲಸಂಪನ್ಮೂಲ ಇಲಾಖೆ ಪ್ರಧಾನ ಕಾರ್ಯದರ್ಶಿ ರಾಕೇಶ್ ಸಿಂಗ್ ಹಾಗೂ ಕಾವೇರಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಚ್ ಎಲ್ ಪ್ರಸನ್ನ ಅವರನ್ನು ರಾಜ್ಯದ ಪ್ರತಿನಿಧಿಗಳನ್ನಾಗಿ ನೇಮಕ ಮಾಡಲಾಗಿದೆ ಎಂದರು.