ಎನ್ಇಟಿ ಅರ್ಹತೆಯುಳ್ಳ ಶಿಕ್ಷಕರ ಕೊರತೆಯಿದೆ: ಉನ್ನತ ಶಿಕ್ಷಣ ಇಲಾಖೆ ಸಚಿವ ಜಿಟಿ ದೇವೇಗೌಡ

ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಅರ್ಹತೆಯುಳ್ಳ ಶಿಕ್ಷಕರ ಕೊರೆತೆ ಇದೆ ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಜಿ.ಟಿ.ದೇವೇಗೌಡ ಅವರು ಭಾನುವಾರ ಹೇಳಿದ್ದಾರೆ...
ಉನ್ನತ ಶಿಕ್ಷಣ ಇಲಾಖೆ ಸಚಿವ ಜಿ.ಟಿ.ದೇವೇಗೌಡ
ಉನ್ನತ ಶಿಕ್ಷಣ ಇಲಾಖೆ ಸಚಿವ ಜಿ.ಟಿ.ದೇವೇಗೌಡ
ಬೆಂಗಳೂರು; ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಅರ್ಹತೆಯುಳ್ಳ ಶಿಕ್ಷಕರ ಕೊರೆತೆ ಇದೆ ಎಂದು ಉನ್ನತ ಶಿಕ್ಷಣ ಇಲಾಖೆ ಸಚಿವ ಜಿ.ಟಿ.ದೇವೇಗೌಡ ಅವರು ಭಾನುವಾರ ಹೇಳಿದ್ದಾರೆ. 
ನಗರದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನಲ್ಲಿ ಭಾನುವಾರ ಕರ್ನಾಟಕ ಸರ್ಕಾರಿ ಕಾಲೇಜು ಶಿಕ್ಷಕರ ಸಂಘ (ಕೆಜಿಸಿಟಿಎ) ಆಯೋಜಿಸಿದ್ದ ಅಖಿಲ ಭಾರತ ವಿಶ್ವವಿದ್ಯಾಲಯ ಮತ್ತು ಕಾಲೇಜು ಉಪನ್ಯಾಸಕರ ಸಂಘಗಳ ಒಕ್ಕೂಟದ (ಎಐಎಫ್'ಯುಸಿಟಿಒ) ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ಎನ್ಇಟಿ) ಅರ್ಹತೆಯುಳ್ಳ ಶಿಕ್ಷಕರ ಕೊರೆತೆ ಇದೆ ಎಂದು ಹೇಳಿದ್ದಾರೆ. 
ಉನ್ನತ ಶಿಕ್ಷಣ ವಿಭಾಗದಲ್ಲಿ ಹಲವು ವರ್ಷಗಳಿಂದಲೂ ಯಾವುದೇ ರೀತಿಯ ನೇಮಕಾತಿಗಳು ನಡೆದಿಲ್ಲ. ಎನ್ಇಟಿ ಅರ್ಹತೆಯುಳ್ಳ ಶಿಕ್ಷಕರ ಕೊರತೆಗಳಿವೆ. ಕಾಲೇಜು ಹಾಗೂ ವಿಶ್ವವಿದ್ಯಾಲಯಗಳಲ್ಲಿ ಕೇವಲ ಶೇ.5 ರಷ್ಟು ಮಾತ್ರ ಎನ್ಇಟಿ ಅರ್ಹತೆಯುಳ್ಳ ಶಿಕ್ಷಕರಿದ್ದಾರೆಂದು ಸಭೆಯಲ್ಲಿ ಎಫ್'ಯುಸಿಟಿಎಕೆ ಅಧ್ಯಕ್ಷ ಡಾ.ಎನ್.ಬಿ.ಸಂಗಪುರ್ ಅವರು ಹೇಳಿದ್ದಾರೆ. 
ಶಿಕ್ಷಕರ, ಸಂಘಟನೆಗಳು ಹಾಗೂ ರಾಜ್ಯ ಸರ್ಕಾರದ ನಡುವೆ ಸಾಕಷ್ಟು ಭಿನ್ನಾಭಿಪ್ರಾಯಗಳು ಮೂಡಿರುವುದರಿಂದ ಸರ್ಕಾರಿ ಕಾಲೇಜುಗಳಲ್ಲಿ ಶಿಕ್ಷಕರ ನೇಮಕಾತಿಗಳಾಗುತ್ತಿಲ್ಲ. ಇದರಿಂದ ಸಾಕಷ್ಟು ಸಮಸ್ಯೆಗಳಾಗುತ್ತಿವೆ ಎಂದು ಸಭೆಯಲ್ಲಿ ಅಧಿಕಾರಿಗಳು ಹೇಳಿದ್ದಾರೆ.
ಈ ವೇಳೆ ಮಾತನಾಡಿದ ಸಚಿವ ಜಿ.ಟಿ.ದೇವೇಗೌಡ ಅವರು, ಉದ್ಯೋಗಾವಕಾಶ ಸೃಷ್ಟಿಸಲು, ಯುವಕರಲ್ಲಿ ಕೌಶಲ್ಯಾಭಿವೃದ್ಧಿ ಹೆಚ್ಚಿಸಲು ಕೆಲಸ ಮಾಡಲಾಗುತ್ತಿದೆ. ಪದವಿ ಹಾಗೂ ಸ್ನಾತಕೋತ್ತರ ಪಡೆದ ವಿದ್ಯಾರ್ಥಿಗಳ ಸಂಖ್ಯೆ ಸರಿಯಾಗಿ ದೊರಕಿದರೆ, ಸಮಸ್ಯೆಗಳು ಬಗೆಹರಿಯುವುದು. ಇದಲ್ಲದೆ ವಿದ್ಯಾರ್ಥಿಗಳಿಗೆ ಅಗತ್ಯವಿರುವ ಸೌಲಭ್ಯಗಳಾದ ಸೂಕ್ತ ರೀತಿಯ ಶೌಚಾಲಯಗಳು, ಕ್ಯಾಂಟೀನ್ ಹಾಗೂ ಪ್ರಯೋಗಾಲಯಗಳ ಕುರಿತಂತೆಯೂ ಕೆಲಸಗಳನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com