

ಇಡಗುಂಜಿ(ಉತ್ತರ ಕನ್ನಡ): ತಮ್ಮ ಪುತ್ರ ಹಾಗೂ ರಾಜ್ಯದ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಬಜೆಟ್ ಮಂಡಿಸುತ್ತಾರೆ. ಯಾವುದೇ ಸಮಸ್ಯೆಯಾಗುವುದಿಲ್ಲ ಎಂದು ಜೆಡಿಎಸ್ ವರಿಷ್ಠ ಹೆಚ್ ಡಿ ದೇವೇಗೌಡ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲ್ಲೂಕಿನ ಇಡಗುಂಜಿ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಗೊಂದಲವಿಲ್ಲ. ಕುಮಾರಸ್ವಾಮಿಯೇ ಬಜೆಟ್ ಮಂಡಿಸಲಿದ್ದಾರೆ ಎಂದರು.
ಬಜೆಟ್ ಮಂಡನೆ ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ. ಈ ಬಗ್ಗೆ ಸಮ್ಮಿಶ್ರ ಸರ್ಕಾರದಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಸರ್ಕಾರದ ಆಡಳಿತ ಸರಿಯಾಗಿಯೇ ನಡೆಯುತ್ತಿದೆ ಎಂದು ಹೇಳಿದರು.