2 ವರ್ಷದೊಳಗೆ ಹಿರಿಯ ಅಧಿಕಾರಿಗಳ ವರ್ಗಾವಣೆ ಬೇಡ: ರೋಹಿಣಿ ಸಿಂಧೂರಿ

ಅವಧಿ ಪೂರ್ವ ವರ್ಗಾವಣೆ ಗೊಂದಲವಿಲ್ಲದಿದ್ದರೆ ಹಿರಿಯ ಸರ್ಕಾರಿ ಅಧಿಕಾರಿಗಳು ತಮ್ಮ ಕೆಲಸವನ್ನು ಪರಿಣಾಮಕಾರಿಯಾಗಿ ನಿರ್ವಹಿಸಬಹುದಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ
Updated on: 

ಹಾಸನ: ಅವಧಿ ಪೂರ್ವ ವರ್ಗಾವಣೆ ಗೊಂದಲವಿಲ್ಲದಿದ್ದರೆ ಹಿರಿಯ ಸರ್ಕಾರಿ ಅಧಿಕಾರಿಗಳು ತಮ್ಮ ಕೆಲಸವನ್ನು ಪರಿಣಾಮಕಾರಿಯಾಗಿ ನಿರ್ವಹಿಸಬಹುದಾಗಿದೆ ಎಂದು ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದ್ದಾರೆ.

ಅವಧಿ ಪೂರ್ವ ವರ್ಗಾವಣೆ ವಿರುದ್ಧ ಕಾನೂನು ಹೋರಾಟದಲ್ಲಿ ಗೆಲುವು ಸಿಕ್ಕಿದ ನಂತರ ಹಾಸನದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ ಸಮ್ಮಿಶ್ರ ಸರ್ಕಾರದೊಂದಿಗೆ ಏನೂ ಮಾಡಲಿಲ್ಲ ಎಂದರು.

ಸರ್ಕಾರಿ ಹಿರಿಯ ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸರ್ಕಾರ ಎರಡು ವರ್ಷದೊಳಗೆ ವರ್ಗಾವಣೆ ಮಾಡಬಾರದು ಎಂದು  ಅಭಿಪ್ರಾಯಪಟ್ಟರು.

ಹೈಕೋರ್ಟ್ ತೀರ್ಪಿನ ಬಗ್ಗೆ ಸಂತಸ ವ್ಯಕ್ತಪಡಿಸಿದ ರೋಹಿಣಿ, ಜಿಲ್ಲಾಧಿಕಾರಿಯಾಗಿ  ಯಾವುದೇ ತೊಂದರೆ ಅಥವಾ ವಿವಾದವಿದ್ದಲ್ಲಿ ಪ್ರಾಮಾಣಿಕವಾಗಿ   ಆದಷ್ಟು ಬೇಗ ಸರ್ಕಾರದೊಂದಿಗೆ ಬಗೆಹರಿಸಿಕೊಳ್ಳಲು ಪ್ರಯತ್ನಿಸುತ್ತೇನೆ.  ಜಿಲ್ಲೆಯ ಸಮಗ್ರ ಅಭಿವೃದ್ದಿಯೇ ತಮ್ಮ ಗುರಿ ಎಂದರು.

ಹಾಸನ ವಿಮಾನ ನಿಲ್ದಾಣ, ರೈಲ್ವೆ ಮೇಲ್ಸುತುವೆ, ಅತ್ಯಾಧುನಿಕ ಗ್ರಂಥಾಲಯ, ಹೊಸ ಕಾರಾಗೃಹ  ಮತ್ತಿತರ ಯೋಜನೆಗಳನ್ನು ಪೂರ್ಣಗೊಳಿಸಲು ಪ್ರಾಮಾಣಿಕವಾಗಿ ಪ್ರಯತ್ನ ನಡೆಸುವುದಾಗಿ ರೋಹಿಣಿ ಸಿಂಧೂರಿ ಭರವಸೆ ನೀಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com