ಇಂಡಿಯನ್ ಎಕ್ಸ್ ಪ್ರೆಸ್ ವರದಿ ನಂತರ ಎಚ್ಚೆತ್ತ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ

ಕಲಬುರಗಿ ಪ್ರದೇಶದಲ್ಲಿ ಸುಮಾರು 100 ವಿದ್ಯಾರ್ಥಿಗಳಿರುವ 75 ಶಾಲೆಗಳಲ್ಲಿ ಒಬ್ಬರೇ ಒಬ್ಬರು ಖಾಯಂ ಶಿಕ್ಷಕರಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕಲಬುರಗಿ: ಕಲಬುರಗಿ ಪ್ರದೇಶದಲ್ಲಿ ಸುಮಾರು 100 ವಿದ್ಯಾರ್ಥಿಗಳಿರುವ 75 ಶಾಲೆಗಳಲ್ಲಿ ಒಬ್ಬರೇ ಒಬ್ಬರು ಖಾಯಂ  ಶಿಕ್ಷಕರಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಮಾಡಿದ ನಂತರ ಎಚ್ಚೆತ್ತುಕೊಂಡ ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಹೆಚ್ಚಿನ ಶಿಕ್ಷಕರನ್ನು ನೇಮಿಸುವಂತೆ ಶೀಘ್ರದಲ್ಲೇ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಮಂಗಳವಾರ ತಿಳಿಸಿದೆ.
ವರದಿ ನೋಡಿದ ಬಳಿಕ ಇಂಡಿಯನ್ ಎಕ್ಸ್ ಪ್ರೆಸ್ ಪ್ರತಿನಿಧಿಯನ್ನು ಸಂಪರ್ಕಿಸಿದ ಆಯೋಗದ ಅಧ್ಯಕ್ಷೆ ಕೃಪಾ ಆಳ್ವ ಅವರು, ವರದಿಯ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಂಡರು.
100 ವಿದ್ಯಾರ್ಥಿಗಳಿಗೆ ಒಬ್ಬರೇ ಶಿಕ್ಷಕರಿದ್ದರೆ ಮಕ್ಕಳು ಗುಣಮಟ್ಟದ ಶಿಕ್ಷಣ ಪಡೆಯಲು ಹೇಗೆ ಸಾಧ್ಯ? ಎಂದು ಪ್ರಶ್ನಿಸಿದ ಅವರು, ಕಿರಿಯ ಪ್ರಾಥಮಿಕ ಶಾಲೆಗಳಲ್ಲೂ ಉತ್ತಮ ಶಿಕ್ಷಣ ನೀಡುವುದು ಸರ್ಕಾರದ ಜವಾಬ್ದಾರಿ. ಸಂವಿಧಾನದ 371(ಜೆ) ಅಡಿ ಹೈದರಾಬಾದ್ ಕರ್ನಾಟಕ ಪ್ರದೇಶಕ್ಕೆ ವಿಶೇಷ ಸ್ಥಾನಮಾನ ಕಲ್ಪಿಸುವ ಈ ಪ್ರದೇಶದಲ್ಲೇ ಸರ್ಕಾರ ಶಿಕ್ಷಕರನ್ನು ನೇಮಿಸಿದೆ ಕಡೆಗಣಿಸಿರುವುದು ಅಚ್ಚರಿ ತಂದಿದೆ ಎಂದಿದ್ದಾರೆ.
ಆದ್ಯತೆ ಆಧಾರದ ಮೇಲೆ ಶೀಘ್ರದಲ್ಲೇ ಆ ಶಾಲೆಗಳಲ್ಲಿ ಹೆಚ್ಚಿನ ಶಿಕ್ಷಕರನ್ನು ನೇಮಿಸುವಂತೆ ರಾಜ್ಯ ಸರ್ಕಾರಕ್ಕೆ ಪತ್ರ ಬರೆಯುವುದಾಗಿ ಕೃಪಾ ಆಳ್ವ ಅವರು ತಿಳಿಸಿದ್ದಾರೆ.
ಬೀದರ್, ಕಲಬುರಗಿ ಯಾದಗಿರಿ, ಕೊಪ್ಪಳ, ಮತ್ತು ಬಳ್ಳಾರಿ ಜಿಲ್ಲೆಗಳು ಸೇರಿದಂತೆ ಹೈದರಹಾದ್ ಕರ್ನಾಟಕ ಭಾಗದ 75ಕ್ಕೂ ಹೆಚ್ಚು ಶಾಲೆಗಳಲ್ಲಿ 2017-18ನೇ ಸಾಲಿನಲ್ಲಿಯೂ ಏಕ ಶಿಕ್ಷಕರನ್ನೇ ಹೊಂದಿವೆ ಎಂದು ಇಂಡಿಯನ್ ಎಕ್ಸ್ ಪ್ರೆಸ್ ಇಂದು ವರದಿ ಪ್ರಕಟಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com