ಹಾಸನ ಮಾಜಿ ಜಿಲ್ಲಾಧಿಕಾರಿ ವಿರುದ್ಧ ಕ್ರಮ ಕೈಗೊಳ್ಳಿ; ಸರ್ಕಾರಕ್ಕೆ ಚುನಾವಣಾ ಆಯೋಗ

ಹಾಸನ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ರಂದೀಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತ ಚುನಾವಮಾ ಆಯೋಗ ರಾಜ್ಯ ಸರ್ಕಾರಕ್ಕೆಮಂಗಳವಾರ ಆದೇಶಿಸಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಹಾಸನ: ಹಾಸನ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ರಂದೀಪ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಭಾರತ ಚುನಾವಮಾ ಆಯೋಗ ರಾಜ್ಯ ಸರ್ಕಾರಕ್ಕೆಮಂಗಳವಾರ ಆದೇಶಿಸಿದೆ. 
ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ರಾಜ್ಯ ಸರ್ಕಾರ ಜ.22 ರಂದು ವರ್ಗಾವಣೆ ಮಾಡಿ ಆ ಸ್ಥಾನಕ್ಕೆ ಏ.15 ರಂದು ರಂದೀಪ್ ಅವರನ್ನು ನೇಮಕ ಮಾಡಿತ್ತು. 
ಈ ವೇಳೆ ವಿಧಾನಸಬಾ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದ ಕಾರಣ ರಂದೀಪ್ ಅವರು ಅಧಿಕಾರ ವಹಿಸಿಕೊಳ್ಳುವುದಕ್ಕೂ ಮುನ್ನ ರಾಜ್ಯ ಚುನಾವಣಾ ಆಯೋಗದ ಅನುಮತಿ ಪಡೆಯಬೇಕಿತ್ತು. ಆದರೆ, ನೇರವಾಗಿ ಅಧಿಕಾರ ವಹಿಸಿಕೊಳ್ಳುವ ಮೂಲಕ ರಂದೀಪ್ ಅವರು ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿದ್ದಾರೆ. ಹೀಗಾಗಿ ರಂದೀಪ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಸರ್ಕಾರಕ್ಕೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 
ಇದಲ್ಲದೆ, ಬಹಳ ಹಾಸನ ಬಹಳ ಸೂಕ್ಷ್ಮಯುತ ವಿಧಾನಸಭಾ ಕ್ಷೇತ್ರವಾಗಿದ್ದು, ಈ ಕ್ಷೇತ್ರದಲ್ಲಿ ಕೇವಲ ಶೇ.4 ರಷ್ಟು ಮಾತ್ರ ಮತದಾನ ನಡೆದಿದೆ. ಈ ಎಲ್ಲಾ ಬೆಳವಣಿಗೆಗಳ ಬಳಿಕವೂ ನ್ಯೂನತೆಗಳನ್ನು ಸರಿಪಡಿಸಲು ಯಾವುದೇ ರೀತಿಯ ಪ್ರಯತ್ನಗಳನ್ನು ಮಾಡಿಲ್ಲ ಎಂದು ಆಯೋಗ ತಿಳಿಸಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com