ರಾಮನಗರ: ಸ್ನೇಹಿತನಿಂದಲೇ ನಿವೃತ್ತ ಪೊಲೀಸ್ ಅಧಿಕಾರಿ ಹತ್ಯೆ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯನ್ನು ಸ್ನೇಹಿತನೇ ...
ಸಿದ್ದಲಿಂಗಯ್ಯ - ಆರೋಪಿ ಶಂಕರ್
ಸಿದ್ದಲಿಂಗಯ್ಯ - ಆರೋಪಿ ಶಂಕರ್
Updated on
ರಾಮನಗರ: ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲ್ಲೂಕಿನ ಗೌಡಗೆರೆಯಲ್ಲಿ ನಿವೃತ್ತ ಪೊಲೀಸ್ ಅಧಿಕಾರಿಯನ್ನು ಸ್ನೇಹಿತನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ಬಳಿ‌ ನಡೆದಿದೆ.
ಬೆಂಗಳೂರಿನ ಜರಗನಹಳ್ಳಿಯ ನಿವಾಸಿ, ನಿವೃತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಿದ್ದಲಿಂಗಯ್ಯ(64) ಅವರನ್ನು ಅವರ ಸ್ನೇಹಿತ ಶಂಕರ್ ಎಂಬಾತ ಗೌಡಗೆರೆ ಗೇಟ್ ಬಳಿ ಕಣ್ಣಿಗೆ ಖಾರದ ಪುಡಿ ಎರಚಿ ಮಾರಾಸ್ತ್ರದಿಂದ ಹತ್ಯೆ ಮಾಡಿ ಬಳಿಕ ಪೊಲೀಸರಿಗೆ ಶರಣಾಗಿದ್ದಾನೆ.
ಸಿಸಿಬಿಯಲ್ಲಿ ಕಾರ್ಯನಿರ್ವಹಿಸಿ 2015ರಲ್ಲಿ ನಿವೃತ್ತಿಯಾಗಿದ್ದ ಸಿದ್ದಲಿಂಗಯ್ಯ ಅವರು ಮೂಲತಃ ಕನಕಪುರ ತಾಲೂಕಿನ ಬೊಮ್ಮನಹಳ್ಳಿ ಗ್ರಾಮದ ನಿವಾಸಿಯಾಗಿದ್ದಾರೆ.  
ಸಿದ್ದಲಿಂಗಯ್ಯ ಹಾಗೂ ವೃತ್ತಿಯಲ್ಲಿ ಮೆಕ್ಯಾನಿಕ್ ಆಗಿದ್ದ ಆರೋಪಿ ಶಂಕರ್ ಕಳೆದ 25 ವರ್ಷಗಳಿಂದ ಸ್ನೇಹಿತರಾಗಿದ್ದು, ಅವರ ನಡುವೆ ಹಣಕಾಸಿನ ವ್ಯವಹಾರವಿತ್ತು. ಅಂಗಡಿ ತೆರೆಯಲು ಹಣ ನೀಡಿದ್ದ ಸಿದ್ದಲಿಂಗಯ್ಯ, ಬಳಿಕ ಅದನ್ನು ಮರಳಿಸುವಂತೆ ಒತ್ತಡ ಹಾಕುತ್ತಿದ್ದ. ಹೀಗಾಗಿ ಹತ್ಯೆ ಮಾಡಿರುವುದಾಗಿ ಆರೋಪಿ ತಪ್ಪೊಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಸಂಬಂಧ ಎಂ.ಕೆ.ದೊಡ್ಡಿ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com