
ಬೆಂಗಳೂರು: ರಾಜ್ಯ ಸರ್ಕಾರ ಜಾನುವಾರುಗಳ ಮೇವಿಗೆ ಮೀಸಲಿಟ್ಟಿರುವ ಗೋಮಾಳ ಭೂಮಿಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಿಸಿದ್ದಾರೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ತಿರಸ್ಕರಿಸಿದೆ.
ಗೋಮಾಳ ಭೂಮಿಯಲ್ಲಿ ಸಾರ್ವಜನಿಕರಿಗೆ ಉಪಯುಕ್ತವಾಗುವ ಆಸ್ಪತ್ರೆಯನ್ನು ಕಟ್ಟಿಸಿದರೆ ಅದಕ್ಕೆ ಕೋರ್ಟ್ ಆಕ್ಷೇಪ ವ್ಯಕ್ತಪಡಿಸುವುದಿಲ್ಲ ಎಂದು ಹೇಳಿದೆ.
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲ್ಲೂಕಿನ ಆರ್ ತಿಮ್ಮಸಂದ್ರ ಗ್ರಾಮದ ನಿವಾಸಿಯೊಬ್ಬರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ತಿರಸ್ಕರಿಸಿದ ವಿಭಾಗೀಯ ಪೀಠ, ಜಾನುವಾರುಗಳಿಗೆ ಮೇವು ಅತ್ಯಂತ ಅಗತ್ಯ, ಆದರೆ ಸಾರ್ವಜನಿಕರ ಆರೋಗ್ಯ ಕೂಡ ಇಲ್ಲಿ ಮುಖ್ಯವಾಗುತ್ತದೆ. ಸರಿಯಾದ ವ್ಯವಸ್ಥೆಯಿರುವ ಆಸ್ಪತ್ರೆಯಿದ್ದರೆ ಜನರಿಗೆ ಆರೋಗ್ಯ ಸೇವೆ ಪಡೆದುಕೊಳ್ಳಲು ಅನುಕೂಲವಾಗುತ್ತದೆ, ಹಾಗೆಂದು ಜಾನುವಾರುಗಳ ಮೇವನ್ನು ಸಂಪೂರ್ಣವಾಗಿ ಕಸಿಯಬೇಕೆಂದು ಹೇಳುವುದಿಲ್ಲ ಎಂದು ನ್ಯಾಯಾಲಯ ಅರ್ಜಿಯ ವಿಚಾರಣೆ ನಡೆಸಿ ಹೇಳಿದೆ.
Advertisement