ಕಾವೇರಿ ನಿರ್ವಹಣಾ ಮಂಡಳಿ ವಿರುದ್ಧ ಸುಪ್ರೀಂ ಮೆಟ್ಟಿಲೇರಲು ಕರ್ನಾಟಕ ನಿರ್ಧಾರ

ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯಕ್ಕೆ ಆದ ಅನ್ಯಾಯ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ರಾಜ್ಯ...
ಸರ್ವಪಕ್ಷ ಸಭೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಸರ್ವಪಕ್ಷ ಸಭೆಯಲ್ಲಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿಯಲ್ಲಿ ರಾಜ್ಯಕ್ಕೆ ಆದ ಅನ್ಯಾಯ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಲು ರಾಜ್ಯ ಸರ್ಕಾರ ಶನಿವಾರ ನಿರ್ಧರಿಸಿದೆ.
ಈ ಸಂಬಂಧ ಇಂದು ನಡೆದ ಸರ್ವಪಕ್ಷ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಜಲ ಸಂಪನ್ಮೂಲ ಸಚಿವ ಡಿ ಕೆ ಶಿವಕುಮಾರ್ ಅವರು, ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಸಂಬಂಧ ಕೇಂದ್ರ ಸರ್ಕಾರ ಹೊರಡಿಸಿದ ಅಧಿಸೂಚನೆಗೆ ನಮ್ಮ ವಿರೋಧವಿದೆ. ಈ ಸಂಬಂಧ ರಾಜ್ಯದ ಕಾನೂನು ತಂಡ ಸುಪ್ರೀಂ ಕೋರ್ಟ್ ನಲ್ಲಿ ಅರ್ಜಿ ಸಲ್ಲಿಸಲಿದೆ ಎಂದರು.
ಕಾವೇರಿ ವಿಚಾರವನ್ನು ರಾಜ್ಯ ಎಲ್ಲಾ ಪಕ್ಷದ ಸಂಸದರು ಸಂಸತ್ತಿನಲ್ಲಿ ಪ್ರಸ್ತಾಪಿಸಲಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಇದೇ ವೇಳೆ ಜುಲೈ 2ರಂದು ನಿಗದಿಯಾಗಿರುವ ಕಾವೇರಿ ನೀರು ನಿರ್ವಹಣಾ ಮಂಡಳಿಯ ಸಭೆಯಲ್ಲಿ ರಾಜ್ಯದ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ.
ರಾಜ್ಯದ ಪ್ರಬಲ ವಿರೋಧದ ನಡುವೆಯೂ ಕೇಂದ್ರ ಸರ್ಕಾರ ಕಾವೇರಿ ನೀರು ನಿರ್ವಹಣಾ ಮಂಡಳಿ ರಚಿಸಿ ಅಧಿಸೂಚನೆ ಹೊರಡಿಸಿರುವ ಹಿನ್ನೆಲೆಯಲ್ಲಿ ರಾಜ್ಯ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಇಂದು ಸರ್ವಪಕ್ಷ ಸಭೆಯಲ್ಲಿ ಚರ್ಚಿಸಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com