ಮಹಾಮಳೆಯಿಂದ ಆಗುಂಬೆ ಘಾಟ್‌ನಲ್ಲಿ ಸ್ಥಗಿತಗೊಂಡಿದ್ದ ಬಸ್ ಸಂಚಾರ ಪುನಾರಂಭ

ಮಹಾಮಳೆಯಿಂದಾಗಿ ಭೂ ಕುಸಿತ ಸಂಭವಿಸಿದ್ದರಿಂದ ಆಗುಂಬೆ ಘಾಟ್‌ನಲ್ಲಿ ಸ್ಧಗಿತಗೊಂಡಿದ್ದ ಬಸ್ ಸಂಚಾರ ಪುನಾರಂಭಗೊಂಡಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಉಡುಪಿ: ಮಹಾಮಳೆಯಿಂದಾಗಿ ಭೂ ಕುಸಿತ ಸಂಭವಿಸಿದ್ದರಿಂದ ಆಗುಂಬೆ ಘಾಟ್‌ನಲ್ಲಿ ಸ್ಧಗಿತಗೊಂಡಿದ್ದ ಬಸ್ ಸಂಚಾರ ಪುನಾರಂಭಗೊಂಡಿದೆ. 
ಭಾರೀ ಮಳೆಯಿಂದಾಗಿ ರಾಷ್ಟ್ರೀಯ ಹೆದ್ದಾರಿ 169ಎ ಆಗುಂಬೆ ಘಾಟ್ ನ ರಸ್ತೆಯ 7ನೇ ತಿರುವಿನಲ್ಲಿ ಭೂಕುಸಿತ ಸಂಭವಿಸಿತ್ತು. ಇದರಿಂದಾಗಿ ಟ್ರಾಫಿಕ್ ಸಮಸ್ಯೆ ಎದುರಾಗಿದ್ದು ಮುಂಜಾಗೃತ ಕ್ರಮವಾಗಿ ಬೃಹತ್ ಲಾರಿಗಳು ಸೇರಿದಂತೆ ಬಸ್ ಸಂಚಾರವನ್ನು ಸ್ಥಗಿತಗೊಳಿಸಲಾಗಿತ್ತು. 
ಆಗುಂಬೆ ಘಾಟ್ನ ತಡೆಗೋಡೆ ಜರಿದಿದ್ದು ತಾತ್ಕಾಲಿಕವಾಗಿ ಮರಳಿನ ಚೀಲವನ್ನು ಸೇರಿಸಿ ತಡೆಗೋಡೆ ಪುನರ್ ನಿರ್ಮಾಣ ಮಾಡಲಾಗಿದೆ. ಸದ್ಯ ಮಳೆ ಕಡಿಮೆಯಾಗಿದ್ದರಿಂದ ಬಸ್ ಸಂಚಾರ ಆರಂಭಿಸುವಂತೆ ಉಡುಪಿ ಜಿಲ್ಲೆಯ ಉಪ ಆಯುಕ್ತರಾದ ಪ್ರಿಯಾಂಕಾ ಮೇರಿ ಫ್ರಾನ್ಸಿಸ್ ಸೂಚಿಸಿದ್ದಾರೆ. 
ಸದ್ಯ ಉಡುಪಿ-ಶಿವಮೊಗ್ಗ ಮತ್ತು ಉಡುಪಿ-ಚಿಕ್ಕಮಗಳೂರು ಮಾರ್ಗದಲ್ಲಿ ಮಿನಿ ಬಸ್ ಸೇವೆಯನ್ನು ಆರಂಭಿಸಲಾಗಿದ್ದು ಬೃಹತ್ ವಾಹನಗಳ ಸಂಚಾರ ನಿಲ್ಲಿಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com