

ಬೆಂಗಳೂರು: ನಗರದ ಸಂಚಾರ ದಟ್ಟಣೆ ಬಗ್ಗೆ ಸರ್ಕಾರ ಗಮನ ನೀಡಬೇಕೆಂದು ಹೈಕೋರ್ಟ್ ಅಭಿಪ್ರಾಯಪಟ್ಟಿದೆ.
ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಮತ್ತು ನ್ಯಾಯಮೂರ್ತಿ ಎಸ್.ಸುನಿಲ್ ದತ್ ಯಾದವ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಎನ್.ನಾಗೇಶ್ ಎಂಬುವವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿತು.
ಬೆಂಗಳೂರು ನಗರದ ಹೊರವಲಯದಲ್ಲಿ ಕೆಎಸ್ಆರ್ ಟಿಸಿ ಮತ್ತು ಖಾಸಗಿ ಬಸ್ಸುಗಳ ಪಾರ್ಕಿಂಗ್ ಗೆ ಆದೇಶ ನೀಡಿ ನಗರದ ಸಂಚಾರದಟ್ಟಣೆಯನ್ನು ನಿಯಂತ್ರಿಸಲು ಹೈಕೋರ್ಟ್ ಆದೇಶ ನೀಡಬೇಕೆಂದು ನಾಗೇಶ್ ಅರ್ಜಿಯಲ್ಲಿ ಕೋರಿದ್ದರು. ಸರ್ಕಾರ ನಗರದ ಹೊರವಲಯದಲ್ಲಿ ಕೋಟಿಗಟ್ಟಲೆ ಹಣ ಖರ್ಚು ಮಾಡಿ ಬಸ್ ನಿಲ್ದಾಣಗಳನ್ನು ನಿರ್ಮಿಸಿದೆ, ಆದರೆ ಅದರ ಬಳಕೆಯಾಗುತ್ತಿಲ್ಲ ಎಂದು ಅರ್ಜಿಯಲ್ಲಿ ಆರೋಪಿಸಿದ್ದರು.