ಬಳ್ಳಾರಿ ಜಿಲ್ಲೆಗೆ ಹರಪನಹಳ್ಳಿ ತಾಲೂಕು ಸೇರ್ಪಡೆಗೆ ಸಚಿವ ಸಂಪುಟ ಅಸ್ತು

ಹೈದರಾಬಾದ್ ಕರ್ನಾಟಕ ವಿಶೇಷ ಸ್ಥಾನಮಾನ ಕಲ್ಪಿಸುವ ಉದ್ದೇಶದಿಂದ ಹರಪನಹಳ್ಳಿ ತಾಲ್ಲೂಕನ್ನು ಮತ್ತೆ...
ಟಿ ಬಿ ಜಯಚಂದ್ರ
ಟಿ ಬಿ ಜಯಚಂದ್ರ
ಬೆಂಗಳೂರು: ಹೈದರಾಬಾದ್ ಕರ್ನಾಟಕ ವಿಶೇಷ ಸ್ಥಾನಮಾನ ಕಲ್ಪಿಸುವ ಉದ್ದೇಶದಿಂದ ಹರಪನಹಳ್ಳಿ ತಾಲ್ಲೂಕನ್ನು ಮತ್ತೆ ಬಳ್ಳಾರಿ ಜಿಲ್ಲೆಗೆ ಸೇರಿಸಲು ಶನಿವಾರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಸಚಿವ ಟಿ.ಬಿ.ಜಯಚಂದ್ರ ಅವರು,  ಹರಪನಹಳ್ಳಿ ತಾಲೂಕಿಗೆ 371(ಜೆ) ವಿಶೇಷ ಸೌಲಭ್ಯ ವಿಸ್ತರಿಸುವ ಉದ್ದೇಶದಿಂದ ಅದನ್ನು ಮತ್ತೆ ಬಳ್ಳಾರಿ ಜಿಲ್ಲೆಗೆ ಸೇರಿಸಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದರು. 
ಕಳೆದ ಡಿ.26ರಂದು ಹರಪನಹಳ್ಳಿಯಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಾಲ್ಲೂಕಿಗೆ ಹೈದರಾಬಾದ್ ಕರ್ನಾಟಕ ಸೌಲಭ್ಯ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ನಡೆಸುವುದಾಗಿ ಭರವಸೆ ನೀಡಿದರು. ಅಲ್ಲದೆ ಅಡ್ವೊಕೆಟ್‌ ಜನರಲ್ ಬಳಿ ಚರ್ಚಿಸಿ ತೀರ್ಮಾನ ಕೈಗೊಳ್ಳುವುದಾಗಿಯೂ ಭರವಸೆ ನೀಡಿದ್ದರು. 
ಹರಪನಹಳ್ಳಿ ತಾಲ್ಲೂಕು ಹಿಂದೆ ಬಳ್ಳಾರಿ ಜಿಲ್ಲೆಯ ಆಡಳಿತ ವ್ಯಾಪ್ತಿಗೆ ಒಳಪಟ್ಟಿತ್ತು. ಆದರೆ ಜಿಲ್ಲೆಗಳ ಪುನರ್ ವಿಂಗಡಣೆಯಿಂದಾಗಿ ಪ್ರಸ್ತುತ ದಾವಣಗೆರೆ ಜಿಲ್ಲೆಯ ಆಡಳಿತ ವ್ಯಾಪ್ತಿಯಲ್ಲಿದೆ. ಹೈದರಾಬಾದ್ ಕರ್ನಾಟಕ 371 ‘ಜೆ’ ವಿಶೇಷ ಸ್ಥಾನಮಾನದಿಂದ ವಂಚಿತವಾಗಿರುವ ಹರಪನಹಳ್ಳಿ ತಾಲ್ಲೂಕನ್ನು ಮತ್ತೆ ಬಳ್ಳಾರಿ ಜಿಲ್ಲೆಗೆ ಸೇರಿಸಬೇಕು ಎಂದು ಒತ್ತಾಯಿಸಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com