ಈಶಾನ್ಯ ರಾಜ್ಯಗಳ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲ- ಸಿದ್ದರಾಮಯ್ಯ

ತ್ರಿಪುರಾ, ಮೇಘಾಲಯ, ಮತ್ತು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕದ ವಿಧಾನಸಭಾ ಚುನಾವಣೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
Updated on: 

ಹುಬ್ಬಳ್ಳಿ: ತ್ರಿಪುರಾ, ಮೇಘಾಲಯ, ಮತ್ತು ನಾಗಾಲ್ಯಾಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಕರ್ನಾಟಕದ ವಿಧಾನಸಭಾ ಚುನಾವಣೆ ಮೇಲೆ ಯಾವುದೇ ರೀತಿಯ ಪರಿಣಾಮ ಬೀರುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

 ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಲ್ಲಿನ ರಾಜಕೀಯ ಬೇರೆಯಾಗಿದೆ ಎಂದರು.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಬ್ಯಾಲೆಟ್ ಕಾಗದ ಬಳಕೆ ಮಾಡಬೇಕೆಂದು ಒತ್ತಾಯಿಸಿದರು.ವಿದ್ಯುನ್ಮಾನ ಮತಯಂತ್ರಗಳಲ್ಲಿ ನಂಬಿಕೆ ಇದೆ. ಆದರೆ, ರಾಜ್ಯದಲ್ಲಿ ನಡೆಯಲಿರುವ ಆಸೆಂಬ್ಲಿ ಚುನಾವಣೆಯಲ್ಲಿ ಬ್ಯಾಲೆಟ್ ಕಾಗದ ಬಳಸಬೇಕೆಂದು ನನ್ನ ವೈಯಕ್ತಿಕ ಅಭಿಪ್ರಾಯವಾಗಿದೆ ಎಂದರು.

ತ್ರಿಪುರಾ, ಮೇಘಾಲಯ, ನಾಗಲ್ಯಾಂಡ್ ಚುನಾವಣಾ ಫಲಿತಾಂಶದಿಂದ ಈ  ರೀತಿ ಹೇಳುತ್ತಿಲ್ಲ ಅನೇಕ ರಾಷ್ಟ್ರಗಳು ಸಾಂಪ್ರದಾಯಿಕ ಚುನಾವಣಾ ವ್ಯವಸ್ಥೆಗೆ ಮರಳಿವೆ. ಆದ್ದರಿಂದ ಬ್ಯಾಲೆಟ್ ವ್ಯವಸ್ಥೆಗೆ ಮರಳುವುದಕ್ಕೆ ಇದು ಸೂಕ್ತ ಕಾಲವಾಗಿದೆ ಎಂದು ಅಭಿಪ್ರಾಯಪಟ್ಟರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com