ಮೊದಲ ದಿನ ಆರೋಗ್ಯ ಕರ್ನಾಟಕ ಯೋಜನೆಗೆ ನೂರಾರು ಮಂದಿ ದಾಖಲಾತಿ

ರಾಜ್ಯ ಸರ್ಕಾರದ ಆರೋಗ್ಯ ಕರ್ನಾಟಕ ಯೋಜನೆ ಜಾರಿಯ ಆರಂಭ ದಿನವೇ ಜನರಿಂದ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ರಾಜ್ಯ ಸರ್ಕಾರದ ಆರೋಗ್ಯ ಕರ್ನಾಟಕ ಯೋಜನೆ ಜಾರಿಯ ಆರಂಭ ದಿನವೇ ಜನರಿಂದ ಅಭೂತಪೂರ್ವ ಪ್ರತಿಕ್ರಿಯೆ ಸಿಕ್ಕಿದೆ. ಬೆಂಗಳೂರಿನ ಮಲ್ಲೇಶ್ವರದ ಕೆ.ಸಿ.ಜನರಲ್ ಆಸ್ಪತ್ರೆ, ಜಯದೇವ ಹೃದ್ರೋಗ ಆಸ್ಪತ್ರೆ, ವಿಕ್ಚೋರಿಯಾ ಆಸ್ಪತ್ರೆಯಲ್ಲಿರುವ ಪ್ರಧಾನ ಮಂತ್ರಿ ಸ್ವಾಸ್ಥ್ಯ ಸುರಕ್ಷಾ ಯೋಜನೆ ಆಸ್ಪತ್ರೆಗಳಲ್ಲಿ ಜನರು ಆರೋಗ್ಯ ಸೇವೆ ಪಡೆದುಕೊಳ್ಳಲು ಸರದಿ ಸಾಲಿನಲ್ಲಿ ನಿಂತಿರುವುದು ಕಂಡುಬಂತು.

ಕೆ,ಸಿ.ಜನರಲ್ ಆಸ್ಪತ್ರೆ ಮೊದಲ ದಿನವೇ 174 ಆರೋಗ್ಯ ಕರ್ನಾಟಕ ಕಾರ್ಡುಗಳು, ಜಯದೇವ ಆಸ್ಪತ್ರೆಯಲ್ಲಿ 122, ಮತ್ತು ವಿಕ್ಟೋರಿಯಾ ಆಸ್ಪತ್ರೆಯಲ್ಲಿ 93 ಕಾರ್ಡುಗಳನ್ನು ನೀಡಲಾಗಿದೆ.

ರಾಜ್ಯದ ಇತರ ಭಾಗಗಳಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಯಲ್ಲಿ 169, ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 93, ಕೋಲಾರದ ಎಸ್ಎನ್ಆರ್ ಆಸ್ಪತ್ರೆಯಲ್ಲಿ 401, ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 60 ಕಾರ್ಡುಗಳು, ಬಳ್ಳಾರಿಯ ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 25, ಧಾರವಾಡದ ಕರ್ನಾಟಕ ವೈದ್ಯಕೀಯ ಸಂಸ್ಥೆಯಲ್ಲಿ 21, ಗುಲ್ಬರ್ಗಾ ಮೆಡಿಕಲ್ ಸೈನ್ಸ್ ನಲ್ಲಿ 17 ಕಾರ್ಡುಗಳು ವಿತರಣೆಯಾಗಿವೆ.

ಹೊರರೋಗಿಗಳಿಗೆ ಸೂಕ್ತ ವೈದ್ಯಕೀಯ ಸೌಲಭ್ಯ ಮತ್ತು ತಾಲ್ಲೂಕು ಮಟ್ಟದ ಆಸ್ಪತ್ರೆಗಳಲ್ಲಿ ರೋಗಿಗಳಿಗೆ ಸರಿಯಾದ ಸೌಲಭ್ಯವಗಳಿರುವುದಿಲ್ಲ ಎನ್ನುತ್ತಾರೆ  ಆರೋಗ್ಯ ಕಾರ್ಯಕರ್ತರು. ಕೆಲವೆಡೆ ಆರೋಗ್ಯ ಕಾರ್ಡುಗಳನ್ನು ನೀಡಲಿಲ್ಲ. ಇನ್ನು ಕೆಲವು ಸರ್ಕಾರಿ ಆಸ್ಪತ್ರೆಗಳಲ್ಲಿ ರೋಗಿಗಳನ್ನು ಖಾಸಗಿ ಆಸ್ಪತ್ರೆಗಳಿಗೆ ಉಲ್ಲೇಖಿಸುವುದು ಕಂಡುಬಂತು.

ಈ ಬಗ್ಗೆ ಆರೋಗ್ಯ ಕಾರ್ಯಕರ್ತರು ಹೀಗೆ ಹೇಳಿದ್ದಾರೆ. ''ಹಲವು ತಾಲ್ಲೂಕು ಮತ್ತು ಜಿಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಅಲ್ಚ್ರಾಸೌಂಡ್, ಎಂಆರ್ ಐ ಸ್ಕಾನಿಂಗ್ ಅಥವಾ ಸಿಟಿ ಸ್ಕಾನಿಂಗ್ ನಂತಹ ವ್ಯವಸ್ಥೆಗಳಿರುವುದಿಲ್ಲ. ಹೀಗಾಗಿ ಖಾಸಗಿ ಆಸ್ಪತ್ರೆಗಳಿಗೆ ಉಲ್ಲೇಖಿಸಬೇಕಾಗುತ್ತದೆ. ಆರೋಗ್ಯ ರಕ್ಷಾ ಸಮಿತಿಯಲ್ಲಿ ಸರ್ಕಾರಿ ಸೌಲಭ್ಯಗಳಿಗೆ ಹಣವನ್ನು ಠೇವಣಿಯಿಡಲಾಗುತ್ತದೆ. ಆದರೆ ಇದರ ಕಾರ್ಯವೈಖರಿಯಲ್ಲಿ ನಿಖರತೆ ಅಥವಾ ಪಾರದರ್ಶಕತೆಯಿರುವುದಿಲ್ಲ ಎನ್ನುತ್ತಾರೆ ಕರ್ನಾಟಕ ಜನಾರೋಗ್ಯ ಚಳವಳಿಯ ಸಂಚಾಲಕಿ ಅಖಿಲ ವಾಸನ್.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com