

ಬೆಂಗಳೂರು: 78 ಶಾಸಕರ ವಿರುದ್ಧ ಸಲ್ಲಿಸಿದ್ದ ದೂರನ್ನು ತಿರಸ್ಕರಿಸಿದ ಕರ್ನಾಟಕ ಲೋಕಾಯುಕ್ತ ವಿರುದ್ಧ ಕ್ರಮ ಕೈಗೊಳ್ಳುವಂತೆ ಜನಾಧಿಕಾರ ಸಂಘರ್ಷ ಪರಿಷತ್ ಎಂಬ ಸರ್ಕಾರೇತರ ಸಂಘಟನೆ ಸಲ್ಲಿಸಿದ್ದ ಮನವಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ.
ಉಪ ಲೋಕಾಯುಕ್ತ ನ್ಯಾಯಮೂರ್ತಿ ಸುಭಾಷ್ ಬಿ ಆದಿ ವಿರುದ್ಧ ಕ್ರಮ ಕೈಗೊಳ್ಳುವಂತೆ ಈ 78 ಮಂದಿ ಶಾಸಕರು ಕಾನೂನು ಮೊರೆ ಹೋಗಿದ್ದರು. ನ್ಯಾಯಮೂರ್ತಿ ಹೆಚ್.ಜಿ.ರಮೇಸ್ ಅವರ ನೇತೃತ್ವದ ವಿಭಾಗೀಯ ಪೀಠ, ಲೋಕಾಯುಕ್ತ ಹೊರಡಿಸಿರುವ ಆದೇಶ ತಪ್ಪು ಎಂದು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದೆ.
ಸರ್ಕಾರೇತರ ಸಂಘಟನೆಯ ಸಹಾಧ್ಯಕ್ಷರಾದ ಆದರ್ಶ್ ಆರ್ ಐಯ್ಯರ್ ಮತ್ತು ಬಿ.ಕೆ.ಪ್ರಕಾಶ್ ಬಾಬು 2016ರ ಜೂನ್ 20ರಂದು 78 ಶಾಸಕರ ವಿರುದ್ಧ ಲೋಕಾಯುಕ್ತ ಮುಂದೆ ಕರ್ನಾಟಕ ಲೋಕಾಯುಕ್ತ ಕಾಯ್ದೆಯ ಸೆಕ್ಷನ್ 17(2)ರಡಿಯಲ್ಲಿ ಅರ್ಜಿ ಸಲ್ಲಿಸಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಮಾನ ಮಾಡಿದ್ದಲ್ಲದೆ ಉಪ ಲೋಕಾಯುಕ್ತ ಸುಭಾಷ್ ಬಿ.ಆದಿಯವರಿಗೆ ಅಗೌರವ ತೋರಿಸಿದ್ದಾರೆ ಎಂದು ದೂರಿನಲ್ಲಿ ವಿವರಿಸಲಾಗಿದೆ.