
ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಹ್ಯಾರಿಸ್ ಜಾಮೀನು ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಶುಕ್ರವಾರಕ್ಕೆ ಮುಂದೂಡಿದೆ.
ಈ ಪ್ರಕರಣ ಕುರಿತು ಇಂದು ವಿಚಾರಣೆ ನಡೆಸಿದ ನ್ಯಾಯಾಧೀಶ ಶ್ರೀನಿವಾಸ್ ಹರೀಶ್ ಕುಮಾರ್, ವಿಶೇಷ ಸಾರ್ವಜನಿಕ ಅಭಿಯೋಜಕರ ಆಕ್ಷೇಪಣೆಗೆ ಎರಡು ದಿನಗಳ ಕಾಲಾವಕಾಶ ನೀಡಿ, ವಿಚಾರಣೆಯನ್ನು ಮುಂದೂಡಿದ್ದರು.
ನಗರದ ಪ್ರತಿಷ್ಠಿತ ಯುಬಿ ಸಿಟಿಯ ಪರ್ಜಿ ಕೆಪೆಯಲ್ಲಿ ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆರೆ ನಲಪಾಡ್ ಹ್ಯಾರಿಸ್ ಹಾಗೂ ಆತನ ಆರು ಮಂದಿ ಸಹಚರರು ಜೈಲು ಶಿಕ್ಷೆ ಅನುಭವಿಸುತ್ತಿದ್ದಾರೆ.
ನಲಪಾಡ್ ಹ್ಯಾರಿಸ್ ಜಾಮೀನು ಅರ್ಜಿಯನ್ನು ಇತ್ತೀಚಿಗೆ ಕೆಳ ನ್ಯಾಯಾಲಯ ವಜಾಗೊಳಿಸಿದ ಹಿನ್ನೆಲೆಯಲ್ಲಿ ಹೈಕೋರ್ಟಿಗೆ ಮೇಲ್ಮನವಿ ಸಲ್ಲಿಸಲಾಗಿದೆ.
Advertisement