ಹಲ್ಲೆ ಪ್ರಕರಣ: ಮಾರ್ಚ್ 21ರವರೆಗೂ ನಲಪಾಡ್ ನ್ಯಾಯಾಂಗ ಬಂಧನ ವಿಸ್ತರಣೆ

ವಿದ್ವತ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಶಾಸಕ ಹ್ಯಾರಿಸ್ ಪುತ್ರ ಮಹಮದ್ ನಲಪಾಡ್ ನ್ಯಾಯಾಂಗ ಬಂಧನ ಅವಧಿಯನ್ನು ಮಾರ್ಚ್ 21ರವರೆಗೂ ವಿಸ್ತರಣೆ ಮಾಡಲಾಗಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ವಿದ್ವತ್ ಮೇಲಿನ ಹಲ್ಲೆ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ಶಾಸಕ ಹ್ಯಾರಿಸ್ ಪುತ್ರ ಮಹಮದ್ ನಲಪಾಡ್ ನ್ಯಾಯಾಂಗ ಬಂಧನ ಅವಧಿಯನ್ನು ಮಾರ್ಚ್ 21ರವರೆಗೂ ವಿಸ್ತರಣೆ ಮಾಡಲಾಗಿದೆ.
ನಲಪಾಡ್ ನ್ಯಾಯಾಂಗ ಬಂಧನ ಇಂದಿಗೆ ಮುಕ್ತಾಯವಾದ ಹಿನ್ನಲೆಯಲ್ಲಿ ನಲಪಾಡ್ ರನ್ನು ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯದಲ್ಲಿ ಹಾಜರುಪಡಿಸಲಾಯಿತು. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಮಹಮದ್ ನಲಪಾಡ್ ನನ್ನು ಪೊಲೀಸರು ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯ ಕಲಾಪಕ್ಕೆ ಹಾಜರುಪಡಿಸಿದ್ದರು. 
ಈ ವೇಳೆ ನಲಪಾಡ್ ಪರ, ಮತ್ತು ವಿದ್ವತ್ ಪರ ವಕೀಲರ ವಾದ ಆಲಿಸಿದ ನ್ಯಾಯಾಧೀಶರು ನಲಪಾಡ್ ನ್ಯಾಯಾಂಗ ಬಂಧನ ಅವಧಿಯನ್ನು 14 ದಿನಗಳ ಅಂದರೆ ಮಾರ್ಚ್ 21ರವರೆಗೂ ವಿಸ್ತರಣೆ ಮಾಡಿದ್ದಾರೆ ಎಂದು ತಿಳಿದುಬಂದಿದೆ. ಇದಕ್ಕೂ ಮೊದಲು ವಿದ್ವತ್ ಪರ ವಾದ ಮಂಡಿಸಿದ್ದ ವಕೀಲರು ನಲಪಾಡ್ ಜಾಮೀನು ಅರ್ಜಿ ವಿರೋಧ ವ್ಯಕ್ತಪಡಿಸಿದ್ದರು. ಅಂತೆಯೇ ನಲಪಾಡ್ ವಿರುದ್ಧ ಸಾಕ್ಷ್ಯ ನಾಶ ಆತಂಕ ವ್ಯಕ್ತಪಡಿಸಿದ್ದ ವಿದ್ವತ್ ಪರ ವಕೀಲರು ಸಾಕ್ಷ್ಯಗಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಇದೆ ಎಂದು ಹೇಳಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com