ಹೆಚ್ಚಿನ ಭದ್ರತೆ ಒದಗಿಸುವಂತೆ ಲೋಕಾಯುಕ್ತ ರಾಜ್ಯ ಸರ್ಕಾರಕ್ಕೆ 20 ಪತ್ರ ಬರೆದಿತ್ತು: ಸಂತೋಷ್ ಹೆಗ್ಡೆ

ಹೆಚ್ಚಿನ ಭದ್ರತೆ ಒದಗಿಸುವಂತೆ ಲೋಕಾಯುಕ್ತ ರಾಜ್ಯ ಸರ್ಕಾರಕ್ಕೆ 20 ಬಾರಿ ಪತ್ರ ಬರೆದಿತ್ತು ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ಗುರುವಾರ ಹೇಳಿದ್ದಾರೆ...
ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
ಬೆಂಗಳೂರು: ಹೆಚ್ಚಿನ ಭದ್ರತೆ ಒದಗಿಸುವಂತೆ ಲೋಕಾಯುಕ್ತ ರಾಜ್ಯ ಸರ್ಕಾರಕ್ಕೆ 20 ಬಾರಿ ಪತ್ರ ಬರೆದಿತ್ತು ಎಂದು ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ಗುರುವಾರ ಹೇಳಿದ್ದಾರೆ. 
ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ್ ಶೆಟ್ಟಿಯವರಿಗೆ ಚೂರಿ ಇರಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಅವರು, ಹೆಚ್ಚಿನ ಭದ್ರತೆಯನ್ನು ನೀಡುವಂತೆ ಲೋಕಾಯುಕ್ತ ಸಂಸ್ಥೆ ರಾಜ್ಯ ಸರ್ಕಾರಕ್ಕೆ 20 ಬಾರಿ ಪತ್ರವನ್ನು ಬರೆದಿದೆ. ಆದರೂ ಸರ್ಕಾರ ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಶೀಘ್ರದಲ್ಲಿಯೇ ಸರ್ಕಾರ ಎಚ್ಚೆತ್ತುಕೊಳ್ಳಲಿದೆ ಎಂದು ನಂಬಿದ್ದೇನೆಂದು ಹೇಳಿದ್ದಾರೆ. 
ಇದೇ ವೇಳೆ ಲೋಕಾಯುಕ್ತ ಸಂಸ್ಥೆ ಕುರಿತಂತೆ ಸರ್ಕಾರದ ವರ್ತನೆ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಅವರು, ಲೋಕಾಯುಕ್ತ ಸಂಸ್ಥೆ ಸರ್ಕಾರದ ವರ್ತನೆ ಬಗ್ಗೆ ನಾನು ಹೆಚ್ಚಿನ ಕಾಳಜಿ ವಹಿಸುತ್ತಿದ್ದೇನೆ. ಸಂಸ್ಥೆಯಲ್ಲಿರುವ ಮೆಟಲ್ ಡಿಟೆಕ್ಟರ್ ಗಳು ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿಲ್ಲ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com