ಬೆಂಗಳೂರು: ಮಾಯಕೊಂಡ ಶಾಸಕ ಶಿವಮೂರ್ತಿ ನಾಯ್ಕ್ ಪುತ್ರಿ ಲಕ್ಷ್ಮೀ ನಾಯ್ಕ್ ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಪಿ.ಸುಂದರ್ ಗೌಡ ಜೊತೆ ನಾಪತ್ತೆಯಾಗಿದ್ದಾರೆ.
ಲಕ್ಷ್ಮೀನಾಯ್ಕ್ ಪೋಷಕರು ಪುತ್ರಿಯನ್ನು ಹುಡುಕಿಕೊಡುವಂತೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲು ಮಾಡಲಾಗಿದೆ. ಶಾಸಕ ಶಿವಮೂರ್ತಿ ನಾಯ್ಕ್ ಪುತ್ರಿಗೆ ಮದುವೆ ನಿಶ್ಚಯವಾಗಿತ್ತು ಎಂದು ಹೇಳಲಾಗಿದೆ. ಇದರ ಬೆನ್ನಲ್ಲೇ ಶಾಸಕರ ಪುತ್ರಿ ಮಾಸ್ತಿಗುಡಿ ಚಿತ್ರ ನಿರ್ಮಾಪಕ ಪಿ ಸುಂದರ್ ಗೌಡ ಜೊತೆ ನಾಪತ್ತೆಯಾಗಿದ್ದರೆಂದು ಪೋಷಕರು ಠಾಣೆಯಲ್ಲಿ ದೂರು ನೀಡಿದ್ದಾರೆ.
ಇನ್ನೂ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರ ಪುತ್ರಿ ತಮ್ಮ ಸ್ನೇಹಿತರಿಗೆ ಕರೆಮಾಡಿ ನಾವು ಮದುವೆಯಾಗಲು ಮೈಸೂರಿಗೆ ಹೋಗುತ್ತಿದ್ದೇವೆ ಎಂದು ತಿಳಿಸಿದ್ದು ಬೆಳಕಿಗೆ ಬಂದಿದೆ. ಮಾಸ್ತಿಗುಡಿ ನಿರ್ಮಾಪಕ ಸುಂದರ್ ಹಾಗೂ ಶಾಸಕರ ಪುತ್ರಿ ಕಳೆದ ಆರು ತಿಂಗಳಿನಿಂದ ಪ್ರೀತಿ ಮಾಡುತ್ತಿದ್ದರು. ಶಾಸಕರ ಯಲಹಂಕ ನ್ಯೂಟೌನ್ ಮನೆಯಿಂದ ಪುತ್ರಿ ನಾಪತ್ತೆಯಾಗಿದ್ದಾಳೆ..
ಈ ಪ್ರಕರಣಕ್ಕೆ ಸಂಬಂಧಿಸಿ ಶಾಸಕರ ಪುತ್ರಿ ತಮ್ಮ ಸ್ನೇಹಿತರಿಗೆ ಕರೆಮಾಡಿ ನಾವು ಮದುವೆಯಾಗಲು ಮೈಸೂರಿಗೆ ಹೋಗುತ್ತಿದ್ದೇವೆ ಎಂದು ತಿಳಿಸಿದ್ದು ಬೆಳಕಿಗೆ ಬಂದಿದೆ, ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಮೈಸೂರಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ.