ವೇತನ ಪರಿಷ್ಕರಣೆ, ಬಡ್ತಿ, ಕನ್ನಡಿಗ ನೌಕರರು ಹಾಗೂ ಹಿಂದಿ ನೌಕರರ ನಡುವೆ ತಾರತಮ್ಯ ನಿಲ್ಲಿಸುವುದು ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮೆಟ್ರೊ ನೌಕರರು ಮಾ.22 ರಂದು ಮುಷ್ಕರ ನಡೆಸಲು ತೀರ್ಮಾನಿಸಿದ್ದಾರೆ. ಆದರೆ ನೌಕರರ ಮುಷ್ಕರಕ್ಕೆ ಬ್ರೇಕ್ ಹಾಕಲು ಮುಂದಾಗಿರುವ ಬಿಎಂಆರ್ ಸಿಎಲ್, ಒಂದು ವೇಳೆ ಮುಷ್ಕರ ನಡೆಸಿದರೆ ಕಠಿಣ ಕ್ರಮ ತೆಗೆದುಕೊಳ್ಳುವುದಾಗಿ ಹೇಳುವ ಮೂಲಕ ಎಸ್ಮಾ ಜಾರಿಗೊಳಿಸುವ ಎಚ್ಚರಿಕೆ ನೀಡಿದೆ.