2011ರ ಕೆಪಿಎಸ್ ಸಿ ನೇಮಕಾತಿ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಕರ್ನಾಟಕ ಲೋಕಸೇವಾ ಆಯೋಗದ 2011ನೇ ಸಾಲಿನ 362 ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿಯನ್ನು....
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್
ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ  2011ನೇ ಸಾಲಿನ 362 ಗೆಜೆಟೆಡ್‌ ಪ್ರೊಬೇಷನರಿ ಅಧಿಕಾರಿಗಳ ನೇಮಕಾತಿಯನ್ನು ಶುಕ್ರವಾರ ಹೈಕೋರ್ಟ್ ವಿಭಾಗೀಯ ಪೀಠ ರದ್ದುಗೊಳಿಸಿ ಮಹತ್ವದ ಆದೇಶ ನೀಡಿದೆ.
2011ರ ಕೆಪಿಎಸ್‌ಸಿ ನೇಮಕಾತಿ ಪಟ್ಟಿಗೆ ಸಮ್ಮತಿ ಸೂಚಿಸಿದ್ದ ರಾಜ್ಯ ಸರ್ಕಾರ ಹಾಗೂ ಕರ್ನಾಟಕ ಆಡಳಿತ ನ್ಯಾಯಮಂಡಳಿ(ಕೆಎಟಿ) ಆದೇಶ ಪ್ರಶ್ನಿಸಿ ರೇಣುಕಾಂಬಿಕೆ ಹಾಗೂ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಇಂದು ನೇಮಕಾತಿ ಆದೇಶವನ್ನು ರದ್ದುಗೊಳಿಸಿದೆ.
ಕೆಪಿಎಸ್ ಸಿ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂಬ ಕಾರಣಕ್ಕೆ 362 ಗೆಜೆಟೆಡ್‌ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಹೊರಡಿಸಿದ್ದ ಅಧಿಸೂಚನೆಯನ್ನು ರಾಜ್ಯ ಸರ್ಕಾರ ರದ್ದುಗೊಳಿಸಿತ್ತು. ಆದರೆ ಸರ್ಕಾರದ ಆದೇಶದ ವಿರುದ್ಧ ಕೆಲ ಅಭ್ಯರ್ಥಿಗಳು ಕೆಎಟಿ ಮೊರೆ ಹೋಗಿದ್ದರು. ಕೆಎಟಿ ಸರ್ಕಾರದ ಆದೇಶವನ್ನು ರದ್ದುಗೊಳಿಸಿತ್ತು. ನಂತರ ಕೆಎಟಿ ಆದೇಶದಂತೆ 2011ರ ಕೆಪಿಎಸ್‌ಸಿ ನೇಮಕಾತಿಗೆ ಸಚಿವ ಸಂಪುಟ ಸಮ್ಮತಿ ಸೂಚಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com