ವಿಧಾನಸೌಧ, ಹೈಕೋರ್ಟ್ ಸೇರಿದಂತೆ ಸೂಕ್ಷ್ಮ ಪ್ರದೇಶಗಳಲ್ಲಿ ಸಂಸತ್ ಮಾದರಿ ಭದ್ರತೆ: ರೆಡ್ಡಿ

ವಿಧಾನಸೌಧ, ಹೈಕೋರ್ಟ್ ಮತ್ತು ಲೋಕಾಯುಕ್ತ ಕಚೇರಿ ಸೇರಿದಂತೆ ಸೂಕ್ಷ್ಮ ಪ್ರದೇಶಗಳಿಗೆ ಸಂಸತ್ ಮಾದರಿ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು’ ...
ರಾಮಲಿಂಗಾ ರೆಡ್ಡಿ
ರಾಮಲಿಂಗಾ ರೆಡ್ಡಿ
ಬೆಂಗಳೂರು: ವಿಧಾನಸೌಧ, ಹೈಕೋರ್ಟ್ ಮತ್ತು ಲೋಕಾಯುಕ್ತ ಕಚೇರಿ ಸೇರಿದಂತೆ ಸೂಕ್ಷ್ಮ ಪ್ರದೇಶಗಳಿಗೆ ಸಂಸತ್ ಮಾದರಿ ಭದ್ರತೆ ಒದಗಿಸಲು ಕ್ರಮ ಕೈಗೊಳ್ಳಲಾಗುವುದು’ ಎಂದು ಗೃಹ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಾಯುಕ್ತ ನ್ಯಾಯಮೂರ್ತಿ ವಿಶ್ವನಾಥ ಶೆಟ್ಟಿ ಅವರ ಕೊಲೆ ಯತ್ನ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು.  ವಿಧಾನ ಸೌಧ, ವಿಕಾಸ ಸೌಧ, ಲೋಕಾಯುಕ್ತ ಕಚೇರಿ, ಎಂ.ಎಸ್ ಬಿಲ್ಡಿಂಗ್ ಸೇರಿದಂತೆ ಹಲವು ಪ್ರದೇಶಗಳಿಗೆ ಬಿಗಿ ಭದ್ರತೆ ಒದಗಿಸುವ ದೃಷ್ಟಿಯಿಂದ ಇಂದು ಡಿಜಿ ಮತ್ತು ಐಜಿಪಿ ಸೇರಿದಂತೆ ಹಲವು ಅಧಿಕಾರಗಳ ಜೊತೆ ರಾಮಲಿಂಗಾ ರೆಡ್ಡಿ ಸಭೆ ನಡೆಸಲಿದ್ದಾರೆ.
 ಮುಖ್ಯಮಂತ್ರಿ ಸಿದ್ದರಾಮಯ್ಯ ಈಗಾಗಲೇ ತನಿಖೆಗೆ ಸೂಚಿಸಿದ್ದಾರೆ. ಲೋಹ ಶೋಧಕ (ಮೆಟಲ್ ಡಿಟೆಕ್ಟರ್) ದೋಷದಿಂದ ಆರೋಪಿ ಬಳಿ ಚಾಕು ಇರುವುದು ಗೊತ್ತಾಗಿಲ್ಲ. ಭದ್ರತೆ ಲೋಪಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಲಾಗುವುದು’ ಎಂದರು.
ದೆಹಲಿಯಲ್ಲಿ  ಸಂಸತ್ ಭವನಕ್ಕೆ ನೀಡಿರುವ ಭದ್ರತೆಯಂತೆ ರಾಜ್ಯದಲ್ಲೂ ವಿಶೇಷ ಸ್ಥಳಗಳಿಗೆ  ಭದ್ರತೆ ಒದಗಿಸಲಾಗುವುದು, ಈ ಸಂಬಂಧ ನೀಲಮಣಿ ರಾಜ ಮತ್ತು ಇತರ ಪೊಲೀಸ್ ಅಧಿಕಾರಗಳ ಜೊತೆ ಸೇರಿ ಯೋಜನೆ ರೂಪಿಸಲಾಗುವುದು ಎಂದು ಹೇಳಿದ್ದಾರೆ.
2001 ರಲ್ಲಿ ಪಾರ್ಲಿಮೆಂಟ್ ಮೇಲೆ ದಾಳಿ ನಡೆದ ನಂತರ ಹೆಚ್ಚಿನ ಸೆಕ್ಯೂರಿಟಿ ಒದಗಿಸಲಾಗಿದೆ,  ಹೆಚ್ಚಿನ ಸಂಖ್ಯೆಯ ಭದ್ರತಾ ಸಿಬ್ಬಂದಿ ನಿಯೋಜಿಸಲಾಗಿದೆ, ಸಂಸತ್ ಪ್ರವೇಶಿಸಬೇಕು ಎಂದರೆ ಹಲವು ಹಂತಗಳ ಭದ್ರತಾ ತಪಾಸಣೆ ಮಾಡಿಕೊಂಡೇ ಹೋಗಬೇಕಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com