ಮಾ.13 ರವರೆಗೂ ಸಿಂಧೂರಿ ವರ್ಗಾವಣೆ ಮಾಡಲ್ಲ: ರಾಜ್ಯ ಸರ್ಕಾರಕ್ಕೆ ಸಿಎಟಿ

ಹಾಸನ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಮಾರ್ಚ್.13ರವರೆಗೂ ವರ್ಗಾವಣೆ ಮಾಡುವುದಿಲ್ಲ ಎಂತು ರಾಜ್ಯ ಸರ್ಕಾರಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಗುರುವಾರ ಹೇಳಿದೆ...
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿರುವ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿಯವರನ್ನು ಮಾರ್ಚ್.13ರವರೆಗೂ ವರ್ಗಾವಣೆ ಮಾಡುವುದಿಲ್ಲ ಎಂತು ರಾಜ್ಯ ಸರ್ಕಾರಕ್ಕೆ ಕೇಂದ್ರ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ಗುರುವಾರ ಹೇಳಿದೆ.
ತಮ್ಮನ್ನು ಅವಧಿ ಪೂರ್ಣ ವರ್ಗಾವಣೆ ಮಾಡಲಾಗಿದೆ ಎಂದು ಆರೆೋಪಿಸಿ ಈ ಹಿಂದೆ ರೋಹಿಣಿ ಸಿಂಧೂರುಯವರು ಸಿಎಟಿ ಮೊರೆ ಹೋಗಿದ್ದರು. ಇದರಂತೆ ವಿಚಾರಣೆ ನಡೆಸಿರುವ ಸಿಎಟಿಯು ಮಾ.13ರವರೆಗೂ ಸರ್ಕಾರದ ವರ್ಗಾವಣೆ ಆದೇಶಕ್ಕೆ ತಡೆಯಾಜ್ಞೆ ನೀಡಿದೆ. 
ರೋಹಿಣಿ ಸಿಂಧೂರಿಯವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಕೆಎಟಿ ಸದಸ್ಯರಾದ ಡಾ.ಕೆ.ಬಿ.ಸುರೇಶ್ ಮತ್ತು ಪಿ.ಕೆ. ಪ್ರಧಾನ್ ಅವರಿದ್ದ ಪೀಠ ಸರ್ಕಾರದ ವರ್ಗಾವಣೆಗೆ ತಡೆ ನೀಡಿದೆ.
ವಿಚಾರಣೆ ವೇಳೆ ಹಾಜರಿದ್ದ ಹೆಚ್ಚುವರಿ ಅಡ್ವೋಕೇಟ್ ಜನರಲ್ ಎ.ಎಸ್.ಪೊನ್ನಣ್ಣ ಅವರು, ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕೆಂದು ನ್ಯಾಯ ಪೀಠಕ್ಕೆ ಮನವಿ ಮಾಡಿದರು. ಅಲ್ಲದೆ, ಮಾ.13ರವರೆಗೂ ರೋಹಿಣಿ ಸಿಂಧೂರಿ ಅವರನ್ನು ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ವರ್ಗಾವಣೆ ಮಾಡುವುದಿಲ್ಲ ಎಂದು ವಾಗ್ದಾನ ನೀಡಿದರು. 
ಈ ಹೇಳಿಕೆ ಪುರಸ್ಕರಿಸಿದ ನ್ಯಾಯಪೀಠ ವರ್ಗಾವಣೆಗೆ ತಡೆಯಾಜ್ಞೆ ನೀಡಿ ಆದೇಶಿಸಿದ್ದು, ವಿಚಾರಣೆಯನ್ನು ಮಾ.13ಕ್ಕೆ ಮುಂದೂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com