ಪ್ರತ್ಯೇಕ ಧರ್ಮ ವಿವಾದ: ಪ್ರತಿಕ್ರಿಯೆ ನೀಡುವಂತೆ ರಾಜ್ಯ, ಕೇಂದ್ರಕ್ಕೆ 'ಹೈ' ಸೂಚನೆ

ವೀರಶೈವ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ...
ಹೈಕೋರ್ಟ್
ಹೈಕೋರ್ಟ್
ಬೆಂಗಳೂರು: ವೀರಶೈವ ಹಾಗೂ ಲಿಂಗಾಯತ ಪ್ರತ್ಯೇಕ ಧರ್ಮ ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ಶುಕ್ರವಾರ ಸೂಚನೆ ನೀಡಿದೆ. 
ತಜ್ಞರ ಸಮಿತಿ ನೇಮಕಗೊಳಿಸಿ ರಾಜ್ಯ ಅಲ್ಪ ಸಂಖ್ಯಾತ ಆಯೋಗ ಹೊರಡಿಸಿದ್ದ ಆದೇಶ ಪ್ರಶ್ನಿಸಿ ಎಂ. ಸತೀಶ್ ಸೇರಿದಂತೆ ಇತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ನಿನ್ನೆ ಪರಿಶೀಲನೆ ನಡೆಸಿರುವ ನ್ಯಾ.ದಿನೇಶ್ ಮಹೇಶ್ವರಿ ಹಾಗೂ ನ್ಯಾ.ಸುನಿಲ್ ದತ್ ಯಾದವ್ ಅವರಿದ್ದ ಪೀಠ, ಪ್ರತ್ಯೇಕ ಧರ್ಮ ಕುರಿತಂತೆ ಪ್ರತಿಕ್ರಿಯೆ ನೀಡುವಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳಿಗೆ ಸೂಚನೆ ನೀಡಿದೆ. ಈ ಮೂಲಕ ಪ್ರತ್ಯೇಕ ಲಿಂಗಾಯತ ಧರ್ಮ ಮಾನ್ಯತೆ ಕುರಿತು ತಜ್ಞರ ಸಮಿತಿ ವರದಿ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅನುಸರಿಸುವ ಪ್ರಕ್ರಿಯೆಗಳಲ್ಲಿ ತಾನು ಮಧ್ಯಪ್ರವೇಶ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದೆ. 
ವಿಚಾರಣೆ ವೇಳೆ ವಿವಾದಕ್ಕೆ ಸಂಬಂಧಿಸಿದಂತೆ ಸರ್ಕಾರದ ನಡಾವಳಿಗಳಿಗೆ ತಡೆಯಾಜ್ಞೆ ನೀಡಲು ಹೈಕೋರ್ಟ್ ನಿರಾಕರಿಸಿ, ಮಾ.15ಕ್ಕೆ ವಿಚಾರಣೆಯನ್ನು ಮುಂದೂಡಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X

Advertisement

X
Kannada Prabha
www.kannadaprabha.com