ವಿದ್ಯಾರ್ಥಿಗಳಿಗೆ ಅಂಕಪಟ್ಟಿ ಡೌನ್ ಲೋಡ್ ಮಾಡಿಕೊಳ್ಳಲು ಡಿಜಿಲಾಕರ್ ವ್ಯವಸ್ಥೆ

ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ತಮ್ಮ ಬೆರಳ ತುದಿಯಲ್ಲಿಯೇ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಯನ್ನು ತಮ್ಮ ಬೆರಳ ತುದಿಯಲ್ಲಿಯೇ ಡೌನ್ ಲೋಡ್ ಮಾಡಿಕೊಳ್ಳಬಹುದು. ಕೇಂದ್ರ ಸರ್ಕಾರ ಡಿಜಿಲಾಕರ್ ಆಪ್ ವ್ಯವಸ್ಥೆಯನ್ನು ಜಾರಿಗೆ ತರುತ್ತಿದ್ದು ಈ ತಂತ್ರಜ್ಞಾನವನ್ನು ಬಳಸಿಕೊಳ್ಳಲು ಕರ್ನಾಟಕ ಸರ್ಕಾರ ನಿರ್ಧರಿಸಿದೆ.

ಮೊದಲ ಹಂತದಲ್ಲಿ, ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಅಂಕಪಟ್ಟಿಗಳನ್ನು ಆಪ್ ನಲ್ಲಿ ಅಪ್ ಲೋಡ್ ಮಾಡಲಾಗುತ್ತದೆ. ನಂತರಹ ಹಂತಗಳಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸ್ ಗಳಿಗೆ ಸಹ ವಿಸ್ತರಿಸಲಾಗುತ್ತದೆ.

ಡಿಜಿ ಲಾಕರ್ ಆಪ್ ನ್ನು ಅಂಕಪಟ್ಟಿ ಡೌನ್ ಲೋಡ್ ಮಾಡಿಕೊಳ್ಳಲು ಅಳವಡಿಸಿಕೊಳ್ಳಲು ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದ್ದು ರಾಷ್ಟ್ರೀಯ ಮಾಹಿತಿ ಕೇಂದ್ರದ(ಎನ್ಐಸಿ) ನೆರವು ಪಡೆಯಲು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ ಮನವಿ ಮಾಡಿದೆ. ಪ್ರಸ್ತುತ ಸ್ಮಾರ್ಟ್ ಫೋನ್ ಗಳಲ್ಲಿ ದಾಖಲಾತಿ ಸರ್ಟಿಫಿಕೇಟ್ ಮತ್ತು ಚಾಲನಾ ಅನುಮತಿ ಪತ್ರ ಸಿಗುವಂತೆ ಮಾಡುವ ವ್ಯವಸ್ಥೆಯನ್ನು ಸಾರಿಗೆ ಇಲಾಖೆ ಡಿಜಿಲಾಕರ್ ವ್ಯವಸ್ಥೆಯನ್ನು ಬಳಸಿಕೊಳ್ಳುತ್ತಿದೆ. ಈ ವ್ಯವಸ್ಥೆಯಿಂದಾಗಿ ಜನರು ತಮ್ಮ ಆರ್.ಸಿ ಮತ್ತು ಡ್ರೈವಿಂಗ್ ಲೈಸೆನ್ಸ್ ಗಳನ್ನು ತೆಗೆದುಕೊಂಡು ಹೋಗಬೇಕಾಗಿಲ್ಲ. ಇದೇ ರೀತಿ ಈ ಆಪ್ ಬಳಸಿಕೊಂಡು ಮುಂದಿನ ಶೈಕ್ಷಣಿಕ ವರ್ಷದಿಂದ ವಿದ್ಯಾರ್ಥಿಗಳು ತಮ್ಮ ಅಂಕಪಟ್ಟಿಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ಅಪ್ ಲೋಡ್ ಮಾಡಲು ಆಧಾರ್ ಸಂಖ್ಯೆ ಕಡ್ಡಾಯವಾಗಿ ನೀಡಬೇಕು. ಆದರೆ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳ ಆಧಾರ್ ಸಂಖ್ಯೆಯನ್ನು ಪಡೆಯಲು ಸಾಧ್ಯವಿಲ್ಲ ಎಂದು ಇತ್ತೀಚೆಗೆ ಹೈಕೋರ್ಟ್ ಹೇಳಿತ್ತು. ಇದರಿಂದಾಗಿ ಶಿಕ್ಷಣ ಇಲಾಖೆ ಆಧಾರ್ ಸಂಖ್ಯೆಯಿಲ್ಲದೇ ವಿದ್ಯಾರ್ಥಿಗಳ ಅಂಕಪಟ್ಟಿಗಳನ್ನು ಹೇಗೆ ಅಪ್ ಲೋಡ್ ಮಾಡಬಹುದು ಎಂಬ ಬಗ್ಗೆ ಎನ್ಐಸಿ ಜೊತೆಗೆ ಚರ್ಚೆ ನಡೆಸುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com