ವೀರಶೈವ ಲಿಂಗಾಯತ ಎರಡೂ ಒಂದೇ: ಶಾಮನೂರು ಶಿವಶಂಕರಪ್ಪ

ವೀರಶೈವ ಲಿಂಗಾಯತ ಎರಡೂ ಒಂದೇ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.
ವೀರಶೈವ ಲಿಂಗಾಯತ ನೌಕರರ ಸಮಾವೇಶದ ಚಿತ್ರ
ವೀರಶೈವ ಲಿಂಗಾಯತ ನೌಕರರ ಸಮಾವೇಶದ ಚಿತ್ರ
Updated on

ತುಮಕೂರು:  ವೀರಶೈವ ಲಿಂಗಾಯತ ಎರಡೂ ಒಂದೇ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಹೇಳಿದ್ದಾರೆ.

ಇಲ್ಲಿ ನಡೆದ  ವೀರಶೈವ ಲಿಂಗಾಯತ ನೌಕರರ ಸಮಾವೇಶದಲ್ಲಿ ಮಾತನಾಡಿದ ಅವರು, ವೀರಶೈವ ಮಹಾಸಭಾ ಯಾವುದೇ ಪಕ್ಷಕ್ಕೂ ಸೇರಿಲ್ಲ. ಮಹಾಸಭೆ ಸ್ವತಂತ್ರ ನಿರ್ಣಯ ತೆಗೆದುಕೊಳ್ಳುತ್ತದೆ ಎಂದರು.

ಯಾರೇ ಮುಖ್ಯಮಂತ್ರಿ ಆದರೂ ನೌಕರರ ವಿಚಾರವಾಗಿ ತಾರತಮ್ಯ ಮಾಡದೆ ಸಮಾನವಾಗಿ ಕಾಣಬೇಕು. ಆದರೆ ಇತ್ತೀಚಿನ ವರ್ಷಗಳಲ್ಲಿ ಈ ರೀತಿ ಆಗುತ್ತಿಲ್ಲ. ತಮ್ಮ ಸಮುದಾಯದ ನೌಕರರಿಗೆ ಮಾತ್ರ ಮನ್ನಣೆ ನೀಡುತ್ತಿದ್ದಾರೆ ಎಂದರು.

‘ರಾಜ್ಯದಲ್ಲಿ ವೀರಶೈವ ಲಿಂಗಾಯತ ನೌಕರರ ಸ್ಥಿತಿ ಶೋಚನೀಯವಾಗಿದೆ. ಸಮುದಾಯದ ಉನ್ನತ ಅಧಿಕಾರಿಗಳನ್ನು ಆಯಕಟ್ಟಿನ ಹುದ್ದೆಗಳಿಗೆ ನೇಮಿಸಿಲ್ಲ. ಅಲ್ಲದೆ ಸಮಾಜದ ಛಿದ್ರ ಮಾಡಲು ಸಿದ್ದರಾಮಯ್ಯ ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com