ಮಾರ್ಚ್ 14ಕ್ಕೆ ನಲಪಾಡ್ ಜಾಮೀನು ಅರ್ಜಿ ಆದೇಶ ಕಾಯ್ದಿರಿಸಿದ ಹೈಕೋರ್ಟ್

ಉದ್ಯಮಿ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಗರದ ಪರಪ್ಪನ ಅಗ್ರಹಾರ ...
ಮೊಹಮ್ಮದ್ ನಲಪಾಡ್
ಮೊಹಮ್ಮದ್ ನಲಪಾಡ್
Updated on: 

ಬೆಂಗಳೂರು: ಉದ್ಯಮಿ ಪುತ್ರ ವಿದ್ವತ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಾಸಕ ಎನ್.ಎ. ಹ್ಯಾರಿಸ್ ಪುತ್ರ ಮೊಹಮದ್ ನಲಪಾಡ್ ಸೋಮವಾರ ಕೂಡ ಜಾಮೀನಿನ ಭಾಗ್ಯ ಸಿಕ್ಕಿಲ್ಲ. ವಾದ-ಪ್ರತಿವಾದ ಆಲಿಸಿದ ಹೈಕೋರ್ಟ್ ಏಕಸದಸ್ಯ ಪೀಠ ನಾಡಿದ್ದು ಬುಧವಾರಕ್ಕೆ ಜಾಮೀನು ತೀರ್ಪು ಕಾಯ್ದಿರಿಸಿದೆ.

ಕಳೆದ ತಿಂಗಳು ಫೆ.17ರಂದು ನಗರದ ಯುಬಿಸಿಟಿಯ ಫರ್ಜಿ ಕಫೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಉದ್ಯಮಿ ಲೋಕನಾಥನ್ ಅವರ ಪುತ್ರ ವಿದ್ವತ್ ಅವರ ಮೇಲೆ ಮೊಹಮದ್ ನಲಪಾಡ್ ಹಾಗೂ ಆತನ ಸಹಚರರು ಮನಬಂದಂತೆ ಹಲ್ಲೆ ನಡೆಸಿದ್ದರು. ಕೆಲ ದಿನಗಳ ಚಿಕಿತ್ಸೆ ಪಡೆದು ವಿದ್ವತ್ ಮಲ್ಯ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

ಪ್ರಕರಣ ನಡೆದ ತಕ್ಷಣ ತಲೆಮರೆಸಿಕೊಂಡಿದ್ದ ಮೊಹಮ್ಮದ್ ನಲಪಾಡ್ ನನ್ನು 36 ಗಂಟೆಗಳ ನಂತರ ಬಂಧಿಸಲಾಗಿತ್ತು.

ಇದೇ ಬುಧವಾರ ಹೈಕೋರ್ಟ್ ಏಕಸದಸ್ಯ ಪೀಠದಿಂದ ಮೊಹಮ್ಮದ್ ಗೆ ಜೈಲೇ, ಬೇಲೇ ಎಂಬ ಬಗ್ಗೆ ನಿರ್ಧಾರವಾಗಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com