ಪ್ರತ್ಯೇಕ ಲಿಂಗಾಯತ ಧರ್ಮ ವಿಚಾರ: ಸಚಿವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಪ್ರತ್ಯೇತ ಲಿಂಗಾಯತ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಪ್ರತ್ಯೇತ ಲಿಂಗಾಯತ ಧರ್ಮ ವಿಚಾರಕ್ಕೆ ಸಂಬಂಧಿಸಿದಂತೆ ಬುಧವಾರ ನಡೆಯುವ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಕೈಗೊಳ್ಳುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ರಾಣೆ ಬೆನ್ನೂರಿನಲ್ಲಿ ಈ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಲಿಂಗಾಯತ ಪ್ರತ್ಯೇಕ ಧರ್ಮ ವಿಚಾರವಾಗಿ ನ್ಯಾಯಮೂರ್ತಿ ನಾಗಮೋಹನ ದಾಸ್ ಸಮಿತಿ ಸರ್ಕಾರಕ್ಕೆ ವರದಿ ಕೊಟ್ಟಿದ್ದು, ಬುಧವಾರ ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ರ್ಚಚಿಸಿ ತೀರ್ಮಾನಿಸುತ್ತೇವೆ ಎಂದು ಹೇಳಿದರು. 
ಇದೇ ವೇಳೆ ಪ್ರತ್ಯೇಕ ಧರ್ಮದ ವಿಚಾರದಲ್ಲಿ ಮುಖ್ಯಮಂತ್ರಿ  ಸಿದ್ದರಾಮಯ್ಯ ನಾಟಕ ಮಾಡುತ್ತಿದ್ದಾರೆ ಎಂದು ವಿಆರ್​ಎಲ್ ಸಮೂಹ ಸಂಸ್ಥೆ ಮುಖ್ಯಸ್ಥರಾದ ಡಾ. ವಿಜಯ ಸಂಕೇಶ್ವರ ಅವರು ಆರೋಪಿಸಿರುವ ಕುರಿತು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸಂಕೇಶ್ವರ ಅವರ ಹೇಳಿಕೆ ಬೇಜವಾಬ್ದಾರಿತನದಿಂದ ಕೂಡಿದ್ದು, ಆಧಾರರಹಿತ, ರಾಜಕೀಯ ಪ್ರೇರಿತ ಹೇಳಿಕೆ ಎಂದು ಹೇಳಿದರು.
ವೀರಶೈವ ಮಹಾಸಭದ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ: ಶ್ಯಾಮನೂರು ಶಿವಶಂಕರಪ್ಪ
ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ವೀರಶೈವ ಮಹಾಸಭದ ಅಧ್ಯಕ್ಷ ಶ್ಯಾಮನೂರು ಶಿವಶಂಕರಪ್ಪ ಅವರು, ಪ್ರತ್ಯೇಕ ಲಿಂಗಾಯ ಧರ್ಮ ವಿಚಾರದಲ್ಲಿ ಮಹಾಸಭದ ನಿರ್ಧಾರದಲ್ಲಿ ಯಾವುದೇ ಬದಲಾವಣೆ ಇಲ್ಲ. ನಮ್ಮ ನಿರ್ಧಾರಕ್ಕೆ ನಾವು ಬದ್ಧರಾಗಿದ್ದೇವೆ. ಲಿಂಗಾಯತ-ವೀರಶೈವ ಬೇರೆ ಬೇರೆ ಅಲ್ಲ. ಪ್ರತ್ಯೇಕ ಧರ್ಮ ಮಾಡುವುದಿದ್ದರೆ ಲಿಂಗಾಯತ-ವೀರಶೈವ ಧರ್ಮ ಮಾಡಲಿ. ಅದನ್ನು ಬಿಟ್ಟು ಲಿಂಗಾಯತ ಬೇರೆ, ವೀರಶೈವ ಬೇರೆ ಮಾಡಲು ಸಾಧ್ಯವಿಲ್ಲ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com